ಬೆಳಗಾವಿ:ಕಾಂಗ್ರೆಸ್ ಸರ್ಕಾರದ ವೈಫಲ್ಯಗಳು ಹಾಗೂ ಜನವಿರೋಧಿ ಆಡಳಿತವನ್ನು ಖಂಡಿಸಿ ಬಿಜೆಪಿ ಹಮ್ಮಿಕೊಂಡಿರುವ ಬಳ್ಳಾರಿ ಚಲೋ ಪಾದಯಾತ್ರೆಗೆ ಬೆಂಬಲಿ ಸೂಚಿಸಿ ಬುಧವಾರ ಜಿಲ್ಲೆಯ ಬಿಜೆಪಿ ಹಾಲಿ, ಮಾಜಿ ಶಾಸಕರು, ಸ್ಥಳೀಯ ಮುಖಂಡರು ಭಾಗವಹಿಸಿ ಸಾಥ್ ನೀಡಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ, ವಿಧಾನಪರಿಷತ್ನ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ, ಬಿಜೆಪಿ ಬೆಳಗಾವಿ ಜಿಲ್ಲಾಧ್ಯಕ್ಷ ಸುಭಾಷ್ಪಾಟೀಲ ಸೇರಿದಂತೆ ಜಿಲ್ಲೆಯ ಹಲವು ಪ್ರಮುಖ ನಾಯಕರು ಹೆಜ್ಜೆ ಹಾಕಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಆಡಳಿತದಲ್ಲಿ ಭ್ರಷ್ಟಾಚಾರ, ವೈಫಲ್ಯ ಹಾಗೂ ಜನಸಾಮಾನ್ಯರ ಸಮಸ್ಯೆಗಳ ನಿರ್ಲಕ್ಷ್ಯ ಹೆಚ್ಚಾಗಿದೆ.ಸರ್ಕಾರದ ವಿರುದ್ಧ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿರುವ ಹೋರಾಟಕ್ಕೆ ಎಲ್ಲ ಕಡೆಯಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ದಿನದಿಂದ ದಿನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುತ್ತಿದ್ದಾರೆ. ಈ ಜನರ ಬೆಂಬಲದಿಂದಾಗಿ ಮುಂಬರುವ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಬೆಳಗಾವಿ ಜಿಲ್ಲೆಯ ಹಿರಿಯ ಹಾಗೂ ಪ್ರಮುಖ ಬಿಜೆಪಿ ನಾಯಕರು ಒಗ್ಗಟ್ಟಾಗಿ ಭಾಗವಹಿಸಿರುವುದು ಜಿಲ್ಲೆಯ ಪಕ್ಷ ಸಂಘಟನೆಯ ಬಲವನ್ನು ಪ್ರದರ್ಶಿಸಿದೆ. ರಾಜ್ಯ ಮಟ್ಟದ ಹೋರಾಟದಲ್ಲಿ ಜಿಲ್ಲೆಯ ಮುಖಂಡರು ಹಾಗೂ ಕಾರ್ಯಕರ್ತರು ಸಕ್ರಿಯವಾಗಿ ಪಾಲ್ಗೊಂಡು ಪಕ್ಷದ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಸುಭಾಸ ಪಾಟೀಲ ಹೇಳಿದರು.
Laxmi News 24×7