ಬೆಳಗಾವಿ: ಅಂತರರಾಜ್ಯ ಬೈಕ್ ಕಳ್ಳತನ ಪ್ರಕರಣವನ್ನು ಭೇದಿಸಿರುವ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪೊಲೀಸರು, ಮೂವರು ಆರೋಪಿಗಳನ್ನು ಬಂಧಿಸಿ, ಸುಮಾರು ₹3.70 ಲಕ್ಷ ಮೌಲ್ಯದ ಏಳು ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತರನ್ನು ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಅಲೀಮ್ ಎಂ. ಗಡಾದ, ಮೊಹಮ್ಮದ್ ಅಕೀಲ್ ಎನ್. ಗಡಾದ ಹಾಗೂ ಶಿವಮೊಗ್ಗ ಜಿಲ್ಲೆಯ ಶಾಹೀದಹ್ಮದ್ ಎಂದು ಗುರುತಿಸಲಾಗಿದೆ.
ಆರೋಪಿಗಳು ಬೆಳಗಾವಿ ಜಿಲ್ಲೆ ಹಾಗೂ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಬೈಕ್ ಕಳ್ಳತನದ ಕೃತ್ಯಗಳನ್ನು ಎಸಗಿರುವ ಆರೋಪ ಎದುರಿಸುತ್ತಿದ್ದಾರೆ. ಪ್ರಕರಣದ ತನಿಖೆ ನಡೆಸಿದ ಚಿಕ್ಕೋಡಿ ಪೊಲೀಸರು ಆರೋಪಿಗಳನ್ನು ಬಂಧಿಸಿ, ಕಳ್ಳತನಕ್ಕೆ ಸಂಬಂಧಿಸಿದ ಏಳು ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ.
ಈ ಸಂಬಂಧ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
Laxmi News 24×7