Breaking News

ಕಳ್ಳಭಟ್ಟಿ ಸರಾಯಿ ಮಾರಾಟದ ಅಡ್ಡೆ ಮೇಲೆ ಬೆಳಗಾವಿ ಪೊಲೀಸರ ದಾಳಿ; ಓರ್ವನ ಬಂಧನ

Spread the love

ಬೆಳಗಾವಿ: ಅಕ್ರಮವಾಗಿ ಕಳ್ಳಭಟ್ಟಿ ಸರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಮಾರಿಹಾಳ ಠಾಣೆ ಪೊಲೀಸರು ದಾಳಿ ನಡೆಸಿ, ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ನ.13ರಂದು ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಮಾರಿಹಾಳ ಠಾಣೆಯ ಪಿಎಸ್‌ಐ ಮಂಜುನಾಥ ಹುಲಕುಂದ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.

ಬೆಳಗಾವಿ ತಾಲೂಕಿನ ಅಷ್ಟೆ ಗ್ರಾಮದ ಸ್ಮಶಾನದ ಸಮೀಪ ಸಾರ್ವಜನಿಕ ಸ್ಥಳದಲ್ಲಿ ನಾಗಪ್ಪ ನಿಂಗಪ್ಪ ಪೂಜೇರಿ ಎಂಬಾತ ತನ್ನ ಸ್ವಂತ ಲಾಭಕ್ಕಾಗಿ ಅಕ್ರಮವಾಗಿ ಕಳ್ಳಭಟ್ಟಿ ಸರಾಯಿ ಮಾರಾಟ ಮಾಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದಾರೆ.

ಈ ವೇಳೆ ಆರೋಪಿತನಿಂದ ಎರಡು ಪ್ಲಾಸ್ಟಿಕ್ ಕ್ಯಾನ್‌ಗಳಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು 7 ಲೀಟರ್ ಕಳ್ಳಭಟ್ಟಿ ಸರಾಯಿಯನ್ನು ವಶಪಡಿಸಿಕೊಳ್ಳಲಾಗಿದೆ. ಜಪ್ತಿ ಮಾಡಿದ ಸರಾಯಿಯ ಮೌಲ್ಯ ಅಂದಾಜು 1,400 ರೂಪಾಯಿ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 163/2026ರ ಅಡಿಯಲ್ಲಿ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 32 ಮತ್ತು 34ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

ಅಕ್ರಮ ಕಳ್ಳಭಟ್ಟಿ ಸರಾಯಿ ಮಾರಾಟದ ವಿರುದ್ಧ ಕಾರ್ಯಾಚರಣೆ ನಡೆಸಿದ ಪಿಎಸ್‌ಐ ಹಾಗೂ ಪೊಲೀಸ್ ಸಿಬ್ಬಂದಿಯ ಕಾರ್ಯವನ್ನು ಬೆಳಗಾವಿ ನಗರ ಪೊಲೀಸ್ ಆಯುಕ್ತರು ಮತ್ತು ಡಿಸಿಪಿ ಅವರು ಶ್ಲಾಘಿಸಿದ್ದಾರೆ.


Spread the love

About Laxminews 24x7

Check Also

ದೇಸೂರು ಶಾಲೆಗೆ 5 ಎಕರೆ ಜಮೀನು ಕೊಡಿಸಲು ಪ್ರಯತ್ನ: ಲಕ್ಷ್ಮೀ ಹೆಬ್ಬಾಳಕರ್

Spread the loveಬೆಳಗಾವಿ: ದೇಸೂರು ಗ್ರಾಮದ ಸರ್ಕಾರಿ ಆದರ್ಶ ಪೂರ್ವ ಪ್ರಾಥಮಿಕ ಮರಾಠಿ ಶಾಲೆಯ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ಶಾಸಕಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ