ಬೆಳಗಾವಿ: ಜಿಲ್ಲೆಯಲ್ಲಿ ಶನಿವಾರದಿಂದ ಆರಂಭಗೊಂಡ ಪಿಯು ದ್ವಿತೀಯ ವರ್ಷದ ಪರೀಕ್ಷೆ ಮೊದಲ ದಿನ ಸುಗಮವಾಗಿ ನಡೆಯಿತು. 33,174 ವಿದ್ಯಾರ್ಥಿಗಳು ಪರೀಕ್ಷೆ ಬರೆದರು, 1,026 ವಿದ್ಯಾರ್ಥಿಗಳು ಗೈರು ಹಾಜರಾದರು.
ಕನ್ನಡ ವಿಷಯದ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 12,420 ವಿದ್ಯಾರ್ಥಿಗಳ ಪೈಕಿ 12,129 ವಿದ್ಯಾರ್ಥಿಗಳು ಹಾಜರಾದರೆ, 291 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿಲ್ಲ.
ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 51 ಕೇಂದ್ರ ತೆರೆಯಲಾಗಿತ್ತು. ಕನ್ನಡ ವಿಷಯದ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 21,780 ವಿದ್ಯಾರ್ಥಿಗಳ ಪೈಕಿ 21,045 ವಿದ್ಯಾರ್ಥಿಗಳು ಹಾಜರಾದರು. 735 ವಿದ್ಯಾರ್ಥಿಗಳು ಗೈರಾದರು.
‘ಯಾವುದೇ ಗೊಂದಲವಿಲ್ಲದೆ ಜಿಲ್ಲೆಯಲ್ಲಿ ಸುಸೂತ್ರವಾಗಿ ಪರೀಕ್ಷೆ ನಡೆದಿದೆ’ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಬೆಳಗಾವಿ ಉಪನಿರ್ದೇಶಕ ಎಂ.ಎಂ.ಕಾಂಬಳೆ ತಿಳಿಸಿದರು.
Laxmi News 24×7