Breaking News

ಬೆಳಗಾವಿ| ದ್ವಿತೀಯ ಪಿಯು ಪರೀಕ್ಷೆ: ಮೊದಲ ದಿನ ಸುಗಮ

Spread the love

ಬೆಳಗಾವಿ: ಜಿಲ್ಲೆಯಲ್ಲಿ ಶನಿವಾರದಿಂದ ಆರಂಭಗೊಂಡ ಪಿಯು ದ್ವಿತೀಯ ವರ್ಷದ ಪರೀಕ್ಷೆ ಮೊದಲ ದಿನ ಸುಗಮವಾಗಿ ನಡೆಯಿತು. 33,174 ವಿದ್ಯಾರ್ಥಿಗಳು ಪರೀಕ್ಷೆ ಬರೆದರು, 1,026 ವಿದ್ಯಾರ್ಥಿಗಳು ಗೈರು ಹಾಜರಾದರು.

ಕನ್ನಡ ವಿಷಯದ ‍ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 12,420 ವಿದ್ಯಾರ್ಥಿಗಳ ಪೈಕಿ 12,129 ವಿದ್ಯಾರ್ಥಿಗಳು ಹಾಜರಾದರೆ, 291 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿಲ್ಲ.

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 51 ಕೇಂದ್ರ ತೆರೆಯಲಾಗಿತ್ತು. ಕನ್ನಡ ವಿಷಯದ ‍ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 21,780 ವಿದ್ಯಾರ್ಥಿಗಳ ಪೈಕಿ 21,045 ವಿದ್ಯಾರ್ಥಿಗಳು ಹಾಜರಾದರು. 735 ವಿದ್ಯಾರ್ಥಿಗಳು ಗೈರಾದರು.

‘ಯಾವುದೇ ಗೊಂದಲವಿಲ್ಲದೆ ಜಿಲ್ಲೆಯಲ್ಲಿ ಸುಸೂತ್ರವಾಗಿ ಪರೀಕ್ಷೆ ನಡೆದಿದೆ’ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಬೆಳಗಾವಿ ಉಪನಿರ್ದೇಶಕ ಎಂ.ಎಂ.ಕಾಂಬಳೆ  ತಿಳಿಸಿದರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ