ಬೆಳಗಾವಿ: ‘ಅಗತ್ಯ ಸೌಲಭ್ಯ ಒದಗಿಸಿದರೆ, ತಾಲ್ಲೂಕಿನ ಸಾಂಬ್ರಾ ವಿಮಾನ ನಿಲ್ದಾಣವನ್ನು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೆ ಏರಿಸಲು ಸಾಧ್ಯ’ ಎಂದು ಕೇಂದ್ರ ವಿಮಾನಯಾನ ಸಚಿವ ರಾಮಮೋಹನ ನಾಯ್ಡು ತಿಳಿಸಿದ್ದಾರೆ.
ಈ ಸಂಬಂಧ ಸಂಸದ ಜಗದೀಶ ಶೆಟ್ಟರ್ ಅವರಿಗೆ ಪತ್ರ ಬರೆದಿದ್ದಾರೆ.
ವಿಮಾನ ನಿಲ್ದಾಣ ಮೇಲ್ದರ್ಜೆಗೇರಿಸಲು ರನ್ವೇ ಉದ್ದಳತೆ, ಇನ್ಸ್ಟ್ರುಮೆಂಟ್ ಲ್ಯಾಂಡಿಂಗ್ ಸಿಸ್ಟಮ್, ಲೈಟಿಂಗ್ ವ್ಯವಸ್ಥೆ ಮತ್ತಿತರ ವಿಷಯ ಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ’ ಎಂದು ತಿಳಿಸಿದ್ದಾರೆ.
ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಬರೆದ ಪತ್ರಕ್ಕೆ ಪೂರಕವಾಗಿ ಸಂಸದ ಜಗದೀಶ ಶೆಟ್ಟರ್ ಅವರೂ ಪತ್ರ ಬರೆದು ಮೇಲ್ದರ್ಜೆಗೇರಿಸುವ ಬಗ್ಗೆ ಪ್ರಸ್ತಾಪಿಸಿದ್ದರು.
Laxmi News 24×7