ಬೆಳಗಾವಿ : ಇಲ್ಲಿನ ಅಬಕಾರಿ ಇಲಾಖೆಯ ಕಚೇರಿ ಮುಂದೆ ಪಾದಚಾರಿಗಳು ಸಂಚರಿಸುವ ಫುಟ್ ಪಾತ್ ಮೇಲೆ ಜಪ್ತಿ ಮಾಡಿದ ವಾಹನಗಳನ್ನು ನಿಲ್ಲಿಸಲಾಗುತ್ತಿದ್ದು, ಅಧಿಕಾರಿಗಳ ಈ ನಡೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ನೋ ಪಾರ್ಕಿಂಗ್ ಸ್ಥಳದಲ್ಲಿ ಜನರು ದ್ವಿಚಕ್ರ ವಾಹನ ನಿಲುಗಡೆ ಮಾಡಿದರೆ ಸಂಚಾರಿ ಪೊಲೀಸರು ದಂಡ ಹಾಕಲಾಗುತ್ತದೆ. ಜತೆಗೆ ದ್ವಿಚಕ್ರ ವಾಹನಗಳನ್ನು ಠಾಣೆಗೆ ತೆಗೆದುಕೊಂಡು ಹೋಗಲಾಗುತ್ತದೆ. ಆದ್ರೆ ಅಬಕಾರಿ ಇಲಾಖೆಯ ಅಧಿಕಾರಿಗಳು ಕೆಲ ದಿನಗಳಿಂದ ಇಲಾಖೆಯ ಮುಂದಿನ ಫುಟ್ ಪಾತ್ ಜಾಗದಲ್ಲಿಯೇ ಜಪ್ತಿ ಮಾಡಿದ ವಾಹನಗಳನ್ನು ನಿಲ್ಲಿಸುತ್ತಿದ್ದಾರೆ.
ಈಚೆಗೆ ಖಾನಾಪುರ ತಾಲ್ಲೂಕಿನ ಕಣಕುಂಬಿ ಬಳಿ ಎಸಿ ಬಸ್ ನಲ್ಲಿ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ಸೇರಿ ಬಸ್ ಅನ್ನು ವಶಕ್ಕೆ ಪಡೆದಿದ್ದರು. ಜಪ್ತಿ ಮಾಡಿದ ಬಸ್ ನ್ನು ಇಲಾಖೆ ಮುಂದೆ ಪಾದಚಾರಿಗಳು ಸಂಚರಿಸುವ ಸ್ಥಳದಲ್ಲಿ ನಿಲ್ಲಿಸಲಾಗಿತ್ತು. ಇದರಿಂದ ಪಾದಚಾರಿಗಳ ಸಂಚರಿಸಲು ಪರದಾಡುವಂತಾಗಿತ್ತು.
ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ವಾಹನವನ್ನು ತೆಗೆಯಲಾಗಿದೆ. ಅಬಕಾರಿ ಇಲಾಖೆ ಅಧಿಕಾರಿಗಳು ಈ ಹಿಂದೆಯೂ ಅದೇಷ್ಟೋ ಬಾರಿ ವಾಹನ ನಿಲ್ಲಿಸಿದ್ದಾರೆ. ಇದರಿಂದ ಪಾದಚಾರಿಗಳು ಕಿಡಿಕಾರುವಂತಾಗಿದೆ.