ಬೆಳಗಾವಿ: ಬೆಳಗಾವಿಯಲ್ಲಿ ಭಾರೀ ಮಳೆಯಾಗಿದ್ದು, ಕಳೆದ ಎರಡು ವಾರಗಳಿಂದ ಸುರಿದ ನಿರಂತರ ಮಳೆಗೆ ಜಿಲ್ಲೆಯ ಜನ ತತ್ತರಿಸಿದ್ದಾರೆ.
ಜೂನ್ 1ರಿಂದ ಜುಲೈ 18ರವರೆಗೆ ಸುರಿದ ಮಳೆಯಲ್ಲಿ 775 ಮನೆಗಳಿಗೆ ಹಾನಿಯಾಗಿದ್ದು, ಜಿಲ್ಲೆಯಲ್ಲಿ ಮೂರು ಮನೆಗಳು ಸಂಪೂರ್ಣ ನೆಲಸಮವಾಗಿದೆ.
ಸವದತ್ತಿಯಲ್ಲಿ 191, ಬೈಲಹೊಂಗಲದಲ್ಲಿ 112, ಕಿತ್ತೂರಿನಲ್ಲಿ 99, ರಾಮದುರ್ಗದಲ್ಲಿ 92, ಚಿಕ್ಕೋಡಿಯಲ್ಲಿ 89, ಬೆಳಗಾವಿಯಲ್ಲಿ 42 ಮನೆಗಳಿಗೆ ಮಳೆಯಿಂದ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಮಾಹಿತಿ ನೀಡಿದ್ದು, ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.