Breaking News

ಜನರ ಕಷ್ಟಗಳಿಗೆ ಸ್ಪಂದಿಸುತ್ತಿದ್ದ ಸುರೇಶ ಅಂಗಡಿ ಅವರ ಸಮಾಧಿ ನಿರ್ಮಾಣ ಕಾರ್ಯದಲ್ಲಿ ಕೈ ಜೋಡಿಸಿ

Spread the love

ಬೆಳಗಾವಿ: ನವದೆಹಲಿಯ ದ್ವಾರಕಾ ನಗರದಲ್ಲಿರುವ ವೀರಶೈವ ಲಿಂಗಾಯತ ರುದ್ರಭೂಮಿಯಲ್ಲಿ ಕೇಂದ್ರ ಸಚಿವರಾಗಿದ್ದ ದಿ| ಸುರೇಶ ಅಂಗಡಿ ಅವರ ಸಮಾಧಿ ಸ್ಥಳದಲ್ಲಿ ನಿರ್ಮಿಸಲಾದ ಅಂಗಡಿ ಅವರ ಪ್ರತಿಮೆಯನ್ನು ಬೆಳಗಾವಿ ಲೋಕಸಭಾ ಸದಸ್ಯೆ ಮಂಗಲಾ ಅಂಗಡಿ ಮಂಗಳವಾರ ಕುಟುಂಬದ ಸದಸ್ಯರ ಉಪಸ್ಥಿತಿಯಲ್ಲಿ ಅನಾವರಣಗೊಳಿಸಿ ನಮನ ಸಲ್ಲಿಸಿದರು.

ಜನರ ಕಷ್ಟಗಳಿಗೆ ಸ್ಪಂದಿಸುತ್ತಿದ್ದ ಸುರೇಶ ಅಂಗಡಿ ಅವರ ಸಮಾಧಿ ನಿರ್ಮಾಣ ಕಾರ್ಯದಲ್ಲಿ ಕೈ ಜೋಡಿಸಿ ಎಲ್ಲ ರೀತಿಯ ಸಹಕಾರ ನೀಡಿದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಅಂತಾರಾಷ್ಟ್ರೀಯ ಬಸವ ಸಮಿತಿ ಸದಸ್ಯರಿಗೆ ಸಂಸದೆ ಮಂಗಲಾ ಅಂಗಡಿ ಕೃತಜ್ಞತೆ ಸಲ್ಲಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ ಕಟೀಲ್‌, ಕೇಂದ್ರ ಸಚಿವರಾದ ನಾರಾಯಣಸ್ವಾಮಿ, ಭಗವಂತ ಖೂಬಾ, ಸಂಸದರಾದ ಸದಾನಂದಗೌಡ, ಪ್ರತಾಪ ಸಿಂಹ, ಬಿ.ವೈ.ರಾಘವೆಂದ್ರ, ಪಿ.ಸಿ.ಗದ್ದಿಗೌಡರ, ಮುನಿಸ್ವಾಮಿ, ಈರಣ್ಣ ಕಡಾಡಿ, ಅಣ್ಣಾಸಾಹೇಬ ಜೊಲ್ಲೆ, ಉಮೇಶ ಜಾಧವ, ಶಾಸಕ ರಮೇಶ ಜಾರಕಿಹೊಳಿ ಹಾಜರಿದ್ದು ನಮನ ಸಲ್ಲಿಸಿದರು.


Spread the love

About Laxminews 24x7

Check Also

2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ?: ಮುಖ್ಯಮಂತ್ರಿ ಸಿದ್ದರಾಮಯ್ಯ*

Spread the love 2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ?: ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಕ್ಕಬಳ್ಳಾಪುರ(ಶಿಡ್ಲಘಟ್ಟ), …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ