Breaking News

ಬೆಳಗಾವಿ:15 ದಿನ ಮಗು ಅನುಮಾಸ್ಪದ ಸಾವು:ತಂದೆಯೇ ಮಗುವಿಗೆ ವಿಷ ಪ್ರಾಶನ ಶಂಕೆ

Spread the love

ಬೆಳಗಾವಿ: 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಮಗು ಏಕಾಏಕಿ ಸಾವನ್ನಪ್ಪಿದ್ದು, ತಂದೆ ಮೇಲೆ ಅನುಮಾನ ವ್ಯಕ್ತವಾಗಿದೆ. ಬೆಳಗಾವಿ  ತಾಲೂಕಿನ ಉಕ್ಕಡ ಗ್ರಾಮದಲ್ಲಿ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಮಗು ಪ್ರಿಯಾಂಕಾ ಇಂದು (ಮಾರ್ಚ್ 17) ಏಕಾಏಕಿ ಸಾವನ್ನಪ್ಪಿದ್ದು, ತಂದೆಯೇ ಮಗುವಿಗೆ ವಿಷ ಪ್ರಾಶನ ಮಾಡಿರುವ ಆರೋಪ ಕೇಳಿಬಂದಿದೆ. ಬಿಮ್ಸ್ ಆಸ್ಪತ್ರೆ ಮುಂದೆ ಮಗುವಿನ ಶವವಿಟ್ಟುಕೊಂಡು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಮತ್ತೊಂದೆಡೆ ಮಗುವಿನ ತಂದೆ ಭೀಮರಾಯ ತಲೆಮರೆಸಿಕೊಂಡಿದ್ದಾನೆ. ಬಿಮ್ಸ್ ಆಸ್ಪತ್ರೆಗೆ ಡಿಸಿಪಿ ನಾರಾಯಣ್ ಬರಮನಿ ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆ ವರದಿ ಬಳಿಕ ಮುಂದಿನ ಕ್ರಮದ ಭರವಸೆ ನೀಡಿದ್ದಾರೆ.

ಹೆರಿಗೆ ಹಿನ್ನೆಲೆ ಶೀಲಾ ತವರುಮನೆ ಉಕ್ಕಡ ಗ್ರಾಮದಲ್ಲಿ ಇದ್ದಳು. ಹೀಗಾಗಿ ಭೀಮರಾಯ ಇಂದು (ಮಾರ್ಚ್ 17) ಮಧ್ಯಾಹ್ನ ಉಕ್ಕಡ ಗ್ರಾಮ ಆಗಮಿಸಿ ಪತ್ನಿ ಹಾಗೂ ಮಗು ಪ್ರಿಯಾಂಕಾಳನ್ನ ನೋಡಿಕೊಂಡು ವಾಪಸ್ ತಮ್ಮೂರು ಕಡೆ ಹೋಗಿದ್ದಾನೆ. ಆದ್ರೆ, ಏಕಾಏಕಿ ಮಗು ಸಾವನ್ನಪ್ಪಿದೆ. ಇದರಿಂದ ಪೋಷಕರು ಕಂಗಾಲಾಗಿದ್ದು, ಮಗು ಚೆನ್ನಾಗಿತ್ತು ದಿಢೀರ್ ಏನಾಯ್ತು ಎಂದು ಯೋಚಿಸುವಾಗ ಮೃತ ಮಗುವಿನ ತಂದೆ ಭೀಮರಾಯನ ಮೇಲೆ ಅನುಮಾನ ಬಂದಿದೆ.

ಸಣ್ಣದೊಂದು ಟ್ಯೂಬ್ ಹಿಡಿದುಕೊಂಡು ಬಂದಿದ್ದ. ಅದೇ ಟ್ಯೂಬ್​ನಿಂದ ಮಗುವಿಗೆ ಕುಡಿಸಿದ್ದಾನೆ ಎಂದು ಪತ್ನಿ ಶೀಲಾ ಹಾಗೂ ಆಕೆಯ ಪೋಷಕರಿಂದ ಗಂಭೀರ ಆರೋಪ ಮಾಡಿದ್ದಾರೆ. ಇನ್ನೊಂದೆಡೆ ಭೀಮರಾಯ ಸಹ ನಾಪತ್ತೆಯಾಗಿದ್ದು, ಮತ್ತಷ್ಟು ಅನುಮಾನಕ್ಕೆ ಕಾರಣವಾಗಿದೆ. ಸದ್ಯ ಬಿಮ್ಸ್ ಆಸ್ಪತ್ರೆ ಮುಂದೆ ಮಗುವಿನ ಶವವಿಟ್ಟುಕೊಂಡು ಆಕ್ರೋಶ ಹೊರಹಾಕಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ  ಡಿಸಿಪಿ ನಾರಾಯಣ್ ಬರಮನಿ ಆಗಮಿಸಿ ಪರಿಶೀಲನೆ ಮಾಡಿದ್ದು, ಮೃತ ಮಗುವಿನ ಮರಣೋತ್ತರ ಪರೀಕ್ಷೆ ಬಳಿಕ ಸತ್ಯ ಆಚೆ ಬರಲಿದೆ.


Spread the love

About Laxminews 24x7

Check Also

ಹೊಟೇಲ್ ಗಳಲ್ಲಿ ಅನಧಿಕೃತವಾಗಿ ಗೃಹ ಬಳಕೆ ಗ್ಯಾಸ್ ಉಪಯೋಗ; 15 ಕ್ಕೂ ಹೆಚ್ಚು ಸಿಲಿಂಡರ್ ವಶಕ್ಕೆ

Spread the loveಹೊಟೇಲ್ ಗಳಲ್ಲಿ ಅನಧಿಕೃತವಾಗಿ ಗೃಹ ಬಳಕೆ ಗ್ಯಾಸ್ ಉಪಯೋಗ ಮಾಡ್ತಿದ್ದ ಹೊಟೇಲ್ ಮಾಲೀಕರಿಗೆ ಆಹಾರ ಇಲಾಖೆ ಅಧಿಕಾರಿಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ