Breaking News

ಬೆಳಗಾವಿ: ಮಹಾರಾಷ್ಟ್ರದಿಂದ ನೀರು ಬಿಡುಗಡೆ ಪ್ರಯತ್ನ

Spread the love

ಬೆಳಗಾವಿ: ಬೇಸಿಗೆಯಲ್ಲಿ ಜನ, ಜಾನುವಾರಗಳಿಗೆ ಕುಡಿಯುವ ನೀರಿನ ಸಮಸ್ಯೆ ಉದ್ಬವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ಒಂಟು ಟಿಎಂಸಿ ನೀರು ಬಿಡುಗಡೆ ಪ್ರಯತ್ನಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ  ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಿಂದ ಒಂದು ಟಿಎಂಸಿ ನೀರು ಬಿಟ್ಟರೆ ಅರ್ಧ ಸಮಸ್ಯೆ ಇತ್ಯರ್ಥವಾಗಲಿದೆ. ಈ ಕುರಿತು ಸರ್ಕಾರ ಮಟ್ಟದಲ್ಲಿ ಚರ್ಚಿಸಿ ನೀರು ಬಿಡುಗಡೆ ಮಾಡಿಸಲಾಗುವುದು ಎಂದರು.
ಸದ್ಯ ಬೆಳಗಾವಿ ಮಹಾನಗರ ಪಾಲಿಕೆ ಸೇರಿ ನಗರ ಸ್ಥಳೀಯ ಸಂಸ್ಥೆ, ಗ್ರಾಪಂ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಬವಿಸಿಲ್ಲ.ಕೆಲವು ಕಡೆ ಬೇರೆ ಬೇರೆ ಕಾರಣಗಳಿಂದ ನೀರು ಪೂರೈಕೆಯಲ್ಲಿ ಸಮಸ್ಯೆ ಆಗಿರುವ ಕುರಿತು ದೂರು ಬಂದಿವೆ. ಜಲಾಶಯದಲ್ಲಿ ನೀರಿನ ಲಭ್ಯತೆ ಇರುವುದರಿಂದ ಬೇಸಿಗೆಯಲ್ಲಿ ಕುಡಿಯುವ ನೀರಿನ ಎದುರಾಗುವುದಿಲ್ಲ. ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು.ಕೊಳವೆ, ತೆರೆದ ಬಾವಿಗಳಲ್ಲಿನ ನೀರನ್ನು ಮಿತವಾಗಿ ಬಳಸಲು ಎಲ್ಲೆಡೆ ಜಾಗೃತಿ ಮೂಡಿಸಬೇಕು  ಎಂದು ಸೂಚಿಸಿದರು.
ಜಿಪಂ ಸಿಇಒ ರಾಹುಲ ಶಿಂಧೆ ಮಾತನಾಡಿ,  ಸದ್ಯ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಬವಿಸಿಲ್ಲ. ಕೊಳವೆ ಬಾವಿ, ಬಹುಗ್ರಾಮ ಕುಡಿಯುವ ನೀರು ಯೋಜನೆ ಅಡಿಯಲ್ಲಿ ದಿನದ 24 ಗಂಟೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗಿದೆ. ಬೇಸಿಗೆ ಸಂದರ್ಭದಲ್ಲಿ ನೀರು ನಿಯಮಿತವಾಗಿ ಬಳಸುವುದು ಅವಶ್ಯಕತೆಯಿದೆ. ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದರೆ ತಕ್ಷಣವೇ ಗ್ರಾಪಂ ವತಿಯಿಂದಲೇ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುವುದು ಎಂದರು.
 ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಮಾತನಾಡಿ, ಬೆಳಗಾವಿ ಮಹಾನಗರ ಪಾಲಿಕೆ ಸೇರಿ ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯ ಜನವಸತಿ ಪ್ರದೇಶದಲ್ಲಿ ಕುಡಿಯುವ ನೀರು ಸಮಯಕ್ಕೆ ಸರಿಯಾಗಿ ಪೂರೈಕೆ ಮಾಡಲಾಗುತ್ತಿದೆ. ನಗರದ ಪ್ರಮುಖ ವೃತ್ತಗಳಲ್ಲಿ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ. ತುರ್ತುಸಂದರ್ಭಕ್ಕಾಗಿ ಟ್ಯಾಂಕರ್ ವ್ಯವಸ್ಥೆ ಮಾಡಿಕೊಳ್ಳು ನಿರ್ದೇಶನ ನೀಡಲಾಗಿದೆ ಎಮದು ತಿಳಿಸಿದರು.
ನಗರ ಪೊಲೀಸ್ ಆಯುಕ್ತ ಭೂಷಣ ಬೊರಸೆ, ಎಸ್‌ಪಿ ಕೆ.ರಾಮರಾಜನ್ ಇತರರಿದ್ದರು.

Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ