Breaking News

ಬೆಳಗಾವಿ ನಗರದ ‘ಸ್ವಚ್ಛ ಶನಿವಾರ’ ಅಭಿಯಾನಕ್ಕೆ ಜಿಪಂ ಆವರಣದಲ್ಲಿ ಚಾಲನೆ

Spread the love

ಬೆಳಗಾವಿ : ಜಿಲ್ಲೆಯಾದ್ಯಂತ ‘ಸ್ವಚ್ಛ ಶನಿವಾರ’ ಅಭಿಯಾನಕ್ಕೆ ಜಿಪಂ, ತಾಪಂ ಹಾಗೂ ಗ್ರಾಪಂ ವ್ಯಾಪ್ತಿಯ ವಿವಿಧ ಇಲಾಖೆಯ ಕಚೇರಿ ಆವರಣದಲ್ಲಿ  ಅಧಿಕಾರಿ, ಸಿಬ್ಬಂದಿ ವಗರ್ಷ ಸ್ವಯಂ ಪ್ರೇರಿತವಾಗಿ ಸ್ವಚ್ಛಗೊಳಿಸುವ ಅಭಿಯಾನಕ್ಕೆ ಉತ್ತಮ  ಸ್ಪಂದನೆ ವ್ಯಕ್ತವಾಯಿತು.
ಶನಿವಾರ ಜಿಲ್ಲೆಯಾದ್ಯಂತ ಆರಂಭಗೊಂಡ ಸ್ವಚ್ಛತಾ ಅಭಿಯಾನದಲ್ಲಿ  ಅಧಿಕಾರಿ, ಸಿಬ್ಬಂದಿ ವರ್ಗ ಕೈಯಲ್ಲಿ ಜಾಡು ಹಿಡಿದುಕೊಂಡು ಸರ್ಕಾರಿ  ಕಚೇರಿ ಪರಿಸರವನ್ನು ಸ್ವಚ್ಛಗೊಳಿಸಿದರು. ಕಚೇರಿಯ ದಾಖಲೆಗಳನ್ನು ಸಮರ್ಪಕವಾಗಿ ಜೋಡಿಸುವುದು, ನೋಟಿಸ್ ಬೋರ್ಡ್ ಸ್ವಚ್ಛತೆ, ನೀರಿನ ಟ್ಯಾಂಕ್ ನಿರ್ವಹಣೆ ಹಾಗೂ ಸರ್ಕಾರಿ ವಾಹನಗಳ ಸ್ವಚ್ಛತೆ ಸೇರಿದಂತೆ ವಿವಿಧ ಕಾರ್ಯಗಳನ್ನು ಕೈಗೊಂಡು ಎಲ್ಲ ಗಮನ ಸೆಳೆದರು.
ಇದೇ ಸಂದರ್ಭದಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಜಿಪಂ ಉಪಕಾರ್ಯದರ್ಶಿ (ಆಡಳಿತ) ಬಸವರಾಜ ಹೆಗ್ಗನಾಯಕ ಚಾಲನೆ ಮಾತನಾಡಿ, ಸ್ವಚ್ಛತೆ ಎನ್ನುವುದು ಕೇವಲ ಒಂದು ದಿನದ ಕಾರ್ಯವಲ್ಲ. ಅದು ಪ್ರತಿಯೊಬ್ಬರ ನಿತ್ಯದ ಜವಾಬ್ದಾರಿ. ಸರ್ಕಾರಿ ಕಚೇರಿಗಳಿಂದಲೇ ಸ್ವಚ್ಛತೆಯ ಸಂದೇಶ ಸಮಾಜಕ್ಕೆ ತಲುಪಬೇಕು.ಪರಿಸರ ಸ್ನೇಹಿ ವಾತಾವರಣ ನಿರ್ಮಾಣ ಹಾಗೂ ಕಚೇರಿಗಳ ಸಮರ್ಪಕ ನಿರ್ವಹಣೆಗೆ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಆದ್ಯತೆ ನೀಡಬೇಕು. ಸ್ವಚ್ಛ ಕಾರ್ಯಾಲಯವು ಉತ್ತಮ ಆಡಳಿತದ ಪ್ರತೀಕವಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಸ್ವಚ್ಛತಾ ಅಭಿಯಾನ ಬಳಿಕ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ವಚ್ಛತೆಯ ಪ್ರತಿಜ್ಞಾವಿಧಿ ಸ್ವೀಕರಿಸಿದರು.
ಜಿಪಂ ಉಪಕಾರ್ಯದರ್ಶಿ (ಅಭಿವೃದ್ಧಿ) ಬಸವರಾಜ ಅಡವಿಮಠ, ಮುಖ್ಯ ಯೋಜನಾಧಿಕಾರಿ ಗಂಗಾಧರ ದಿವಟರ, ಸಹಾಯಕ ಕಾರ್ಯದರ್ಶಿ ರಾಹುಲ್ ಕಾಂಬಳೆ  ಇತರರಿದ್ದರು.

Spread the love

About Laxminews 24x7

Check Also

ಕರ್ನಾಟಕ ಹೈಕೋರ್ಟ್‌ನಲ್ಲಿ ಬೃಹತ್ ನೇಮಕಾತಿ: SSLC ಪಾಸಾದವರಿಗೆ ಸುವರ್ಣಾವಕಾಶ!

Spread the loveಬೆಂಗಳೂರು: ಉದ್ಯೋಗಕ್ಕಾಗಿ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಹೈಕೋರ್ಟ್ ಭರ್ಜರಿ ಸಿಹಿ ಸುದ್ದಿ ನೀಡಿದೆ. ಬೆಂಗಳೂರು, ಧಾರವಾಡ ಮತ್ತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ