Breaking News

ಮದ್ಯ ಮಾರಾಟ ನಿಷೇಧಿಸಿದ ಬೆಳಗಾವಿ ಜಿಲ್ಲಾಧಿಕಾರಿ

Spread the love

ಬೆಳಗಾವಿ: ಹೋಳಿ ಹಾಗೂ ರಂಗಪಂಚಮಿ ಹಬ್ಬ-2026 ರ ಅಂಗವಾಗಿ ಬೆಳಗಾವಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳ ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧಿಸಿದ ಬೆಳಗಾವಿ ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಅವರು ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಅಬಕಾರಿ ಕಾಯ್ದೆ 1965 ರ ಕಲಂ 21 (1) ರಡಿ ಪ್ರದತ್ತವಾದ ಅಧಿಕಾರದ ಮೇರೆಗೆ ಅನುಬಂಧದಲ್ಲಿ ನಮೂದಿಸಲಾದ ಬೆಳಗಾವಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರದೇಶಗಳಲ್ಲಿ ಬೇರೆ ಬೇರೆ ದಿವಸಗಳಂದು ರಂಗಪಂಚಮಿಯನ್ನು ಆಚರಿಸಲಾಗುತ್ತದೆ.

ಈ ಹಿನ್ನೆಲೆಯಲ್ಲಿ ಹೋಳಿ (ಬಣ್ಣ) ಆಚರಣೆಯ ಕಾಲಕ್ಕೆ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತ ದೃಷ್ಟಿಯಿಂದ ಅನುಬಂಧದಲ್ಲಿ ನಮೂದಿಸಲಾದ ಬೆಳಗಾವಿ ಜಿಲ್ಲೆಯ (ಬೆಳಗಾವಿ ತಾಲೂಕು ಹೊರತುಪಡಿಸಿ) ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳ ಪ್ರದೇಶಗಳಲ್ಲಿ ಹಾಗೂ ಅವುಗಳ ಮುಂದೆ ನಮೂದಿಸಿದ ದಿನಾಂಕ ಹಾಗೂ ಸಮಯಗಳಂದು ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇಧಿಸಿ, ಮದ್ಯ/ಬಾರ ಅಂಗಡಿಗಳನ್ನು ಬಂದ್ ಇಡುವಂತೆ ಈ ಮೂಲಕ ಆದೇಶಿಸಲಾಗಿದೆ.

ಈ ಆದೇಶದಲ್ಲಿಯ ಸೂಚನೆಯನ್ನು ಉಲ್ಲಂಘಿಸಿದಲ್ಲಿ ಅಂಥವರು ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 32ರನ್ವಯ ಶಿಕ್ಷೆಗೆ ಒಳಪಡಿಸಲಾಗುತ್ತದೆ.

ಅಬಕಾರಿ ಜಂಟಿ ಆಯುಕ್ತರು, ಅಬಕಾರಿ ಉಪ ಆಯುಕ್ತರು, ಅಬಕಾರಿ ಅಧೀಕ್ಷಕರು, ಅಬಕಾರಿ ಉಪ ಅಧೀಕ್ಷಕರು ಮತ್ತು ಅಬಕಾರಿ ಉಪ ಅಧೀಕ್ಷಕರು, ಬೆಳಗಾವಿ/ಚಿಕ್ಕೋಡಿ ಇವರು ಸದರಿ ದಿನಗಳಂದು ಮದ್ಯ ಮಾರಾಟ ಆಗದಂತೆ ಕಟ್ಟುನಿಟ್ಟಾಗಿ ನಿಗಾ ವಹಿಸಬೇಕು.

ಕರ್ನಾಟಕ ಅಬಕಾರಿ ಕಾಯ್ದೆ ಅಡಿ ಒಬ್ಬ ವ್ಯಕ್ತಿ ಹೊಂದಬೇಕಾದ ಮದ್ಯ ಸಂಗ್ರಹಣೆ ಹೊರ್ತು ಪಡಿಸಿ ಹೆಚ್ಚಿನ ಸಂಗ್ರಹಣೆ ಇರದಂತೆ ಹಾಗೂ ಲೈಸನ್ಸ್ ಇಲ್ಲದ ಆವರಣಗಳಲ್ಲಿ ಸಂಗ್ರಹಣೆ ಇಡದಂತೆ ಸೂಕ್ತ ಕ್ರಮ ಜರುಗಿಸಲು ಸೂಚಿಸಿದ್ದಾರೆ.


Spread the love

About Laxminews 24x7

Check Also

ಸರ್ಕಾರಿ ಶಾಲೆಗಳನ್ನು ಮುಚ್ಚುವ ನಿರ್ಧಾರ ವಿರುದ್ಧ ಜನ ಚಳುವಳಿ

Spread the loveಬೆಳಗಾವಿ : ರಾಜ್ಯ ಸರ್ಕಾರ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯಡಿ ಸರ್ಕಾರಿ ಶಾಲೆಗಳನ್ನು ಮುಚ್ಚುವ ನಿರ್ಧಾರದಿಂದ ಹಿಂದೆ ಸರಿಯದಿದ್ದಲ್ಲಿ ಜನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ