Breaking News

ಎಂಆರ್ ಲಸಿಕೆ ಪಡೆದು ಮಗು ಸಾವು: ಪರಿಹಾರಕ್ಕಾಗಿ ಜಿಲ್ಲಾಧಿಕಾರಿಗಳ ಮೊರೆ ಹೋದ ಪಾಲಕರು..!

Spread the love

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಬೋಚಬಾಳ ಗ್ರಾಮದ 13 ತಿಂಗಳ ಮಗು ಮಧು ಉಮೇಶ ಕುರಗುಂದಿ ಎಂಆರ್ ಲಸಿಕೆಯನ್ನು ಪಡೆದು ಸಾವನ್ನಪ್ಪಿದ್ದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ಮಗುವಿನ ಸಾವಿಗೆ ಸೂಕ್ತ ಪರಿಹಾರ ನೀಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.ಈ ಹಿಂದೆಯೇ ರಾಮದುರ್ಗ ತಾಲೂಕಿನಲ್ಲಿ ಈ ಎಂಆರ್ ಲಸಿಕೆಯನ್ನು ಹಾಕಿಸಿದ್ದಕ್ಕೆ ಮೂರು ಮಕ್ಕಳು ಸಾವನ್ನಪ್ಪಿದ್ದವು. ಸಾಲಹಳ್ಳಿಯ ಅದೇ ಪ್ರಾಥಮಿಕ ಕೇಂದ್ರದ ಸ್ಟ್ಯಾಫ್ ನರ್ಸ್ ಸಲೀಮಾ ಮಹಾತ್ ನೀಡಿದ ಎಂ.ಆರ್ ಲಸಿಕೆಯಿಂದ 13 ತಿಂಗಳ ಕಂದಮ್ಮ ಸಾವನ್ನಪ್ಪಿದೆ. ಹಾಗಾಗಿ ನರ್ಸ್ ಮೇಲೆ ಕ್ರಮ ಕೈಗೊಂಡು, ಸೂಕ್ತ ಪರಿಹಾರ ನೀಢಬೇಕೆಂದು ಮಗುವಿನ ಪಾಲಕರು ಜಿಲ್ಲಾಧಿಕಾರಿಗಳ ಮುಂದೆ ತಮ್ಮ ಆಕ್ರೋಶ ಹೊರಹಾಕಿದ್ದಾರೆ.ಈ ವೇಳೆ ಬೋಚಬಾಳ ಗ್ರಾಮ ಪಂಚಾಯತ ಸದಸ್ಯರಾದ ಭೀಮಶಿ ಹಾದಿಮನಿ ಮಾತನಾಡಿ, ಈಗಾಗಲೇ ಬೆಳಗಾವಿ ಜಿಲ್ಲೆಯಲ್ಲಿ ಮೂರು ಮಕ್ಕಳ ಸಾವು ಪ್ರಕರಣಕ್ಕೆ ಸೂಕ್ತ ನ್ಯಾಯ ಸಿಗಬೇಕು. ಇದು ಮಾಸುವ ಮುನ್ನವೇ ಮತ್ತೊಂದು ಮಗು ಸಾವು ಪ್ರಕರಣ ಸಂಭವಿಸಿದೆ. ಇದಕ್ಕೆ ಕಾರಣರಾದ ಆರೋಗ್ಯ ಇಲಾಖೆ ಸಿಬ್ಬಂದಿಯ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಇನ್ನು ಮಕ್ಕಳ ಸಾವಿಗೆ ಸೂಕ್ತ ಪರಿಹಾರ ನೀಡುವಂತಾಗಬೇಕು ಎಂದರು.ಇನ್ನು ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ಮೂರು ಮಕ್ಕಳು ಸಾವನ್ನಪ್ಪಿದ್ದು ಸಾರ್ವಜನಿಕರು ಆರೋಗ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇನ್ನು ಮಗುವಿನ ಸಾವಿಗೆ ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ. ಇನ್ನು ಈ ಕುರಿತಂತೆ ಜಿಲ್ಲಾಡಳಿತ ಯಾವ ಕ್ರಮ ಕೈಗೊಳ್ಳಲಿದೆ ಎಂದು ಕಾದು ನೋಡ


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ