Breaking News

ಹೋಳಿಗೆ ದಾಸೋಹಕ್ಕೆ ನಟ ಸಾಯಿ ಕುಮಾರ್ ಹಾಗೂ ಸಚಿವ ಗೋವಿಂದ ಕಾರಜೋಳ ಚಾಲನೆ

Spread the love

ಬೆಳಗಾವಿ :ಕುಂದಾನಗರಿ ಬೆಳಗಾವಿಯಲ್ಲಿ ಮೂರು ವರ್ಷಗಳ ಬಳಿಕ ಅದ್ಧೂರಿ ಕನ್ನಡ ರಾಜ್ಯೋತ್ಸವದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ಬರುವವರಿಗೆಲ್ಲಾ ಹೋಳಿಗೆ ಊಟ ಹಾಕಿಸಲು ನಿರ್ಧರಿಸಲಾಗಿದೆ.

ಕನ್ನಡ ರಾಜ್ಯೋತ್ಸವದಲ್ಲಿ ಭಾಗಿಯಾಗುವ 50 ಸಾವಿರ ಜನರಿಗೆ ಹುಕ್ಕೇರಿ ಹಿರೇಮಠ ವತಿಯಿಂದ 1 ಲಕ್ಷ ಹೋಳಿಗೆ ದಾಸೋಹದ ವ್ಯವಸ್ಥೆ ಮಾಡಲಾಗಿದೆ ಎಂದು ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

ಈ ಬಾರಿ ಅದ್ದೂರಿಯಾಗಿ ರಾಜ್ಯೋತ್ಸವ ನಡೆಸಲು ತೀರ್ಮಾನಿಸಿದ್ದೇವೆ, ಒಬ್ಬರಿಗೆ ಎರಡು ಹೋಳಿಗೆ ಪ್ರಕಾರ ಒಂದು ಲಕ್ಷ ಹೋಳಿಗೆ ಮಾಡಿಸಲು ತೀರ್ಮಾನ ಮಾಡಿದ್ದೇವೆ, ಇದಕ್ಕಾಗಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿಯ 200 ಬಾಣಸಿಗರು ಬರಲಿದ್ದು, 150 ಜನ ಹೆಣ್ಣುಮಕ್ಕಳಿಂದ ಹೋಳಿಗೆ, 50 ಪುರುಷರಿಂದ ಕಾಯಿ ಪಲ್ಯ, ಅನ್ನ ಸಾಂಬಾರ್ ಮಾಡಿಸಲಾಗುತ್ತದೆ ಎಂದು ತಿಳಿಸಿದರು.

 

ಇನ್ನೂ, ಹೋಳಿಗೆ ದಾಸೋಹಕ್ಕೆ ನಟ ಸಾಯಿ ಕುಮಾರ್ ಹಾಗೂ ಸಚಿವ ಗೋವಿಂದ ಕಾರಜೋಳ ಚಾಲನೆ ನೀಡಲಿದ್ದಾರೆ. ಹಾಗಾಗಿ ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯೋತ್ಸವಕ್ಕೆ ಸರ್ಕಾರ ವಿಶೇಷ ಅನುದಾನ ನೀಡಬೇಕು ಎಂದು ಸ್ವಾಮೀಜಿ ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಶಿವಾಜಿನಗರದಲ್ಲಿ GBA ಅಧಿಕಾರಿಗಳ ಮೇಲೆ ಹಲ್ಲೆ; ಬೆಳಗ್ಗೆಯೇ ದಾಳಿ ಪ್ಲಾನ್, 11 ಮಂದಿ ಅರೆಸ್ಟ್

Spread the loveಬೆಂಗಳೂರು: ಶಿವಾಜಿನಗರದಲ್ಲಿ  ಫುಟ್‌ಪಾತ್ ತೆರವು ಕಾರ್ಯಾಚರಣೆ ವೇಳೆ GBA ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ