Breaking News

ಇನ್ಮುಂದೆ ಚಿನ್ನಸ್ವಾಮಿಯಲ್ಲಿ ನಡೆಯುವ ಎಲ್ಲಾ ಪಂದ್ಯಗಳಲ್ಲಿಯೂ ಮೃತರ ನೆನಪಿಗೆ 11 ಸೀಟ್ ಮೀಸಲು

Spread the love

ಬೆಂಗಳೂರು: ಚಿನ್ನಸ್ವಾಮಿಯಲ್ಲಿ ಸಂಭವಿಸಿದ್ದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಮೃತ 11 ಜನರ ನೆನಪಿಗಾಗಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 11 ಸೀಟುಗಳನ್ನು ಮೀಸಲಿಡಲಾಗುವುದು ಎಂದು ಕೆಎಸ್‌ಸಿಎ (KSCA) ತಿಳಿಸಿದೆ.

ಚಿನ್ನಸ್ವಾಮಿ ಕ್ರೀಡಾಂಗಣದ ) ಹೊರಗೆ ಅಭಿಮಾನಿಗಳ ನಡುವೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿತ್ತು. ಈ ಅವಘಡದಲ್ಲಿ 11 ಜನರು ಸಾವನ್ನಪ್ಪಿದ್ದರು. ಹೀಗಾಗಿ ಈ 11 ಜನರ ನೆನಪಿಗಾಗಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 11 ಸೀಟು ಮೀಸಲಿಡಲು ಕೆಎಸ್‌ಸಿಎ ನಿರ್ಧರಿಸಿದೆ.

ಚಿನ್ನಸ್ವಾಮಿಯಲ್ಲಿ ನಡೆಯುವ ಪ್ರತಿಯೊಂದು ಪಂದ್ಯಕ್ಕೂ 11 ಸೀಟುಗಳನ್ನು ಮೀಸಲಿಡಲಾಗುವುದು ಹಾಗೂ ಈ 11 ಸೀಟುಗಳನ್ನು ಮಾರಾಟ ಮಾಡುವುದಿಲ್ಲ. ಅಂತಾರಾಷ್ಟ್ರೀಯ ಪಂದ್ಯಗಳು ನಡೆಯುವ ಸಂದರ್ಭದಲ್ಲಿಯೂ ಸಹ 11 ಸೀಟುಗಳನ್ನು ಮೃತರ ಹೆಸರಿನಲ್ಲಿ ಮೀಸಲಿಡಲಾಗುವುದು. ಜೊತೆಗೆ ಮುಖ್ಯ ದ್ವಾರದ ಭಾಗದಲ್ಲಿ ಬೋರ್ಡ್ ಅಳವಡಿಕೆ ಮಾಡಿ, ಅದರಲ್ಲಿ ಮೃತರ ಹೆಸರನ್ನ ನಮದು ಮಾಡಲಿದೆ.

ಇನ್ನೂ ಆಟಗಾರರು ಪ್ರ್ಯಾಕ್ಟೀಸ್‌ ಮಾಡುವಾಗ 11 ನಂಬರ್‌ನ ಜೆರ್ಸಿಯನ್ನು ಧರಿಸುತ್ತಾರೆ. 11 ಜನರಿಗೆ ಗೌರವಾರ್ಥವಾಗಿ 11 ಖಾಲಿ ಚೇರ್‌ಗಳನ್ನು ಬಿಡಲಾಗುತ್ತೆ. ಹೀಗಾಗಿ ಆ 11 ಟಿಕೆಟ್‌ಗಳನ್ನು ಮಾರಾಟ ಮಾಡುವುದಿಲ್ಲ ಎಂದಿದೆ.

19ನೇ ಆವೃತ್ತಿಯ ಐಪಿಎಲ್ ಉದ್ಘಾಟನಾ ಪಂದ್ಯದ ವೇಳೆ ಕೆಎಸ್‌ಸಿಎ & ಆರ್‌ಸಿಬಿ ಮ್ಯಾನೇಜ್ಮೆಂಟ್ ಮೃತರಿಗೆ 1 ನಿಮಿಷ ಮೌನಚಾರಣೆ ಮಾಡಲಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ