Home / ಜಿಲ್ಲೆ / ಬೆಳಗಾವಿ ಜಿಲ್ಲಾಧಿಕಾರಿಗೆ ಪತ್ರ ಬರೆದ ನಾಗಾಭರಣ..!!

ಬೆಳಗಾವಿ ಜಿಲ್ಲಾಧಿಕಾರಿಗೆ ಪತ್ರ ಬರೆದ ನಾಗಾಭರಣ..!!

Spread the love

ತಾಲೂಕಿನ ಯಳ್ಳೂರು ಬಳಿಯ ರಾಜಹಂಸಗಡದಲ್ಲಿ ಶಿವಾಜಿ ಪ್ರತಿಮೆ ಸ್ಥಾಪಿಸುವ ಹಾಗೂ ಕೋಟೆಯ ಅಭಿವೃದ್ಧಿ ಯೋಜನೆಯ ಅಧಿಕೃತ ಸರಕಾರಿ ಕಾರ್ಯಕ್ರಮವು ಸಂಪೂರ್ಣವಾಗಿ ಮರಾಠಿಯಲ್ಲಿಯೇ ನಡೆದು ಭಾರಿ ವಿವಾದಕ್ಕೊಳಗಾಗಿರುವ ಪ್ರಕರಣವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಗಂಭೀರವಾಗಿ ಪರಿಗಣಿಸಿದ್ದು ಈ ಸಂಬಂಧ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಇಂದು ಎಚ್ಚರಿಕೆಯ ಪತ್ರವೊಂದನ್ನು ಬರೆದಿದೆ.

ರಾಜಹಂಸಗಡ ಕಾರ್ಯಕ್ರಮದ ಬಗ್ಗೆ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯ ಅಧ್ಯಕ್ಷ ಅಶೋಕ ಚಂದರಗಿ ಅವರು ಇಂದು ಗುರುವಾರ ಮುಂಜಾನೆ ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ದೂರು ನೀಡಿದ ಹಿನ್ನೆಲೆಯಲ್ಲಿ ಇಂದೇ ಸಂಜೆ ಪ್ರಾಧಿಕಾರದ ಅಧ್ಯಕ್ಷರು ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಖಡಕ್ ಪತ್ರ ಬರೆಯುವ ಮೂಲಕ ಕ್ರಮಕ್ಕೆ ಮುಂದಾಗಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ನಡೆಯುವ ಬಹುತೇಕ ಕಾರ್ಯಕ್ರಮಗಳು ಮರಾಠಿ ಭಾಷೆಯನ್ನೊಳಗೊಂಡಿರುತ್ತವೆ ಎನ್ನುವ ಬಹಳಷ್ಟು ದೂರುಗಳು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಬರುತ್ತಿದ್ದು ಈ ಬಗ್ಗೆ ತಮ್ಮ ಗಮನ ಸೆಳೆದರೂ ತಾವು ಎಚ್ಚರಿಕೆ ವಹಿಸದಿರುವದು ಕಂಡು ಬಂದಿದೆಯೆಂದು ಪ್ರಾಧಿಕಾರದ ಅಧ್ಯಕ್ಷ ಟಿ. ಎಸ್. ನಾಗಭರಣ ಅವರು ಜಿಲ್ಲಾಧಿಕಾರಿ ಎಸ್.ಬಿ. ಬೊಮ್ಮನಹಳ್ಳಿ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಭಾಷಾ ಭಾವೈಕ್ಯತೆಯನ್ನು ಮೇಳೈಸುವ ಜೊತೆಗೆ ಬೆಳಗಾವಿ ಜಿಲ್ಲಾ ಯಳ್ಳೂರು ಗ್ರಾಮದ ರಾಜಹಂಸಗಡದ ಕೋಟೆಯ ಮೇಲೆ ಬಹು ಎತ್ತರದ ಶಿವಾಜಿ ಪ್ರತಿಮೆ ಸ್ಥಾಪಿಸುವ ಮತ್ತು ಕೋಟೆ ಸುಧಾರಣೆಗಾಗಿ ಸರಕಾರ ಮುಂದಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಕನ್ನಡಿಗರು ಮತ್ತು ಮರಾಠಿ ಭಾಷಿಕರು ಸಾಂಸ್ಕøತಿಕವಾಗಿ ಬದುಕನ್ನು ಕಟ್ಟಿಕೊಂಡು ಸೌಹಾರ್ದಯುತವಾಗಿ ಬಾಳ್ವೆ ನಡೆಸುತ್ತಿರುವ ಇಂಥಹ ಸಂದರ್ಭದಲ್ಲಿ ಭಾಷಾ ಬಾಂಧವ್ಯವನ್ನು ಹಾಳು ಮಾಡುವ ಧಿಕ್ಕಿನತ್ತ ಕಾರ್ಯೋನ್ಮಖವಾಗುತ್ತಿರುವದು ದುರದೃಷ್ಠಕರ. ಸಾಂಸ್ಕೃತಿಕ ಕರ್ನಾಟಕದ ಪರಿಕಲ್ಪನೆಯೊಂದಿಗೆ ಕನ್ನಡವನ್ನು ಮತ್ತಷ್ಟು ಜಾಗೃತಿಗೊಳಿಸುವ ಸಾಂಸ್ಕೃತಿಕ ಸೌಹಾರ್ದ ಬದುಕನ್ನು ಕಟ್ಟಿಕೊಳ್ಳಲು ಪೂರಕ ವಾತಾವರಣವನ್ನು ನಿರ್ಮಿಸಬೇಕಾದ ಅಧಿಕಾರಿಗಳೇ ಭಾಷಾ ಬಾಂಧವ್ಯಕ್ಕೆ ಧಕ್ಕೆ ಉಂಟುಮಾಡುತ್ತಿರುವದು ವಿಷಾದನಿಯವಾಗಿದೆಯೆಂದು ನಾಗಾಭರಣ ಅವರು ಪತ್ರದಲ್ಲಿ ಹೇಳಿದ್ದಾರೆ.

ರಾಜಹಂಸಗಡ ಕಾರ್ಯಕ್ರಮವು ಸರಕಾರದ ಅಧಿಕೃತ ಕಾರ್ಯಕ್ರಮವಾಗಿದ್ದು ಇದನ್ನು ಆಯೋಜಿಸುವ ಪೂರ್ಣ ಜವಾಬ್ದಾರಿ ಹೊತ್ತ ಅಧಿಕಾರಿಗಳು ವೇದಿಕೆಯ ಹಿಂಭಾಗದ ಫಲಕವನ್ನು ಮರಾಠಿ ಭಾಷೆಯಲ್ಲಿ ಬರೆಸುವ ಮೂಲಕ ಕನ್ನಡವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿರುವದು ಕನ್ನಡ ಭಾಷೆಗೆ ಮಾಡಿದ ಅವಮಾನವೇ ಸರಿ. ಇದನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಗಂಭೀರವಾಗಿ ಪರಿಗಣಿಸಿದೆ. ಕನ್ನಡ ಭಾಷಾ ಅನುಷ್ಠಾನದಲ್ಲಿ ವಿಮುಖ ನೀತಿ ಅನುಸರಿಸುತ್ತಿರುವ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವದು ಅನಿವಾರ್ಯವಾಗುತ್ತದೆ. ಈ ಕಾರ್ಯಕ್ರಮವನ್ನು ಆಯೋಜಿಸಿದ ಅಧಿಕಾರಿಗಳನ್ನು ಗುರುತಿಸಿ ಕೈಕೊಂಡ ಕ್ರಮವನ್ನು ಪ್ರಾಧಿಕಾರಕ್ಕೆ ವರದಿ ಮಾಡಬೇಕೆಂದು ಪತ್ರದಲ್ಲಿ ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದೆ.


Spread the love

About Laxminews 24x7

Check Also

ಸವದತ್ತಿ: ಬಹಿರ್ದೆಸೆ ತಾಣವಾದ ಚಿಕ್ಕುಂಬಿ ಕೆರೆ, ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ

Spread the loveಸವದತ್ತಿ: ಗ್ರಾಮಸ್ಥರ ಜೀವನಾಡಿಯಾಗಿದ್ದ ಚಿಕ್ಕುಂಬಿ ಕೆರೆ ಇದೀಗ ಬಹಿರ್ದೆಸೆ ತಾಣವಾಗಿ ಮಾರ್ಪಟ್ಟಿದೆ. ಗ್ರಾಮ ಪ್ರವೇಶಿಸುತ್ತಿದ್ದಂತೆ ದುರ್ವಾಸನೆಯೇ ಸ್ವಾಗತಿಸುತ್ತದೆ.   …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ