Breaking News

ಅನೈತಿಕ ಸಂಬಂಧ ; ಬೆಳಗಾವಿಯಲ್ಲಿ ಇಬ್ಬರು ಏಕಕಾಲಕ್ಕೆ ನೇಣಿಗೆ ಶರಣು

Spread the love

ಬೆಳಗಾವಿ‌ : ಅನೈತಿಕ ಸಂಬಂಧ ಹೊಂದಿದ್ದವರಿಗೆ ಮನೆಯವರು ಹೇಳಿದ ಬುದ್ಧಿವಾದದಿಂದ ಬೇಸರಗೊಂಡು ಏಕಕಾಲಕ್ಕೆ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಮೀಪದ ಬೆನ್ನಾಳಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ.

ಶಿವಾಜಿ ಗಾಡಿವಡ್ಡರ್ (31), ಜಯಶ್ರೀ ಗಾಡಿವಡ್ಡರ್ (35) ಆತ್ಮಹತ್ಯೆಗೆ ಶರಣಾದವರು.

ಶಿವಾಜಿ ಜೋಗ್ಯಾನಟ್ಟಿ ಸಮೀಪದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡಿದ್ದು, ಜಯಶ್ರೀ ಎಂಬ ಮಹಿಳೆ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ.

ಇಬ್ಬರು ಅಕ್ಕಪಕ್ಕದ ಮನೆಯವರಾಗಿದ್ದು, ಅನೈತಿಕ ಸಂಬಂಧ ಹೊಂದಿದ್ದರು. ಈ ವಿಷಯ ಮನೆಯವರಿಗೆ ಗೊತ್ತಾಗಿದೆ. ಬಳಿಕ ಎರಡು ಕುಟುಂಬಸ್ಥರು ಇಬ್ಬರಿಗೂ ಬುದ್ಧಿವಾದ ಹೇಳಿದ್ದಾರೆ. ಇದರಿಂದ ಬೇಸರಗೊಂಡ ಯುವಕ ಮರಕ್ಕೆ ನೇಣು ಬಿಗಿದುಕೊಂಡಿದ್ದಾನೆ.

ಈತ ನೇಣು ಬಿಗಿದುಕೊಂಡಿರುವ ವಿಷಯ ತಿಳಿದ ಮಹಿಳೆ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಕತಿ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬೈಕ್ – ಹಾಲಿನ ವಾಹನ ನಡುವೆ ಡಿಕ್ಕಿ; ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವು

Spread the loveಶಿವಮೊಗ್ಗ: ಹಾಲಿನ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಶಿವಮೊಗ್ಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ