Breaking News

ಕಳ್ಳತನ ಪ್ರಕರಣ; ಇಬ್ಬರು ಖತರ್ನಾಕ್ ಆರೋಪಿಗಳು ಅರೆಸ್ಟ್

Spread the love

ಬೆಳಗಾವಿ: ಸುಮಾರು ಒಂದು ತಿಂಗಳ ಹಿಂದೆ ಯರಗಟ್ಟಿ ಪಟ್ಟಣದಲ್ಲಿ ನಡೆದ ಕಿರಾಣಿ ಅಂಗಡಿ ಕಳ್ಳತನ ಮತ್ತು ಮನೆ ಕಳ್ಳತನ ಮಾಡಲು ಪ್ರಯತ್ನ ಮಾಡಿದ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳನ್ನು ಮುರಗೋಡ ಪೊಲೀಸರು ಬಂದಿಸಿದ್ದಾರೆ.

ಬಂಧಿತರಿಂದ 51,000/- ರೂ ಮೊತ್ತದ ಕಿರಾಣಿ ಅಂಗಡಿಯ ಮಾಲನ್ನು ಮತ್ತು ಕೃತ್ಯಕ್ಕೆ ಬಳಸಿದ್ದ 2,00,000/- ರೂ ಮೌಲ್ಯದ ಅಷೆ ಟಂಟಂ ವಾಹನವನ್ನು ಹಾಗೂ ಒಂದು ರಾಡ್ ಸೇರಿದಂತೆ ಒಟ್ಟು-2,51,000/- ರೂ ಮೌಲ್ಯದ ವಸ್ತುಗಳನು ಪೊಲೀಸರು ವಶಪಡಿಸಿಕೊಂಡಿರುತ್ತಾರೆ.

ರಾಮದುರ್ಗ ಡಿ.ಎಸ್.ಪಿ ರಾಮನಗೌಡ ಹಟ್ಟಿ ಮಾರ್ಗದರ್ಶನದಲ್ಲಿ ಮುರಗೋಡ ಪೊಲೀಸ್ ಇನ್ಸ್ ಪೆಕ್ಟರ್ ಮೌನೇಶ್ವರ ಮಾಲಿ ಪಾಟೀಲ ನೇತೃತ್ವದಲ್ಲಿ ಠಾಣೆಯ ಸಿಬ್ಬಂದಿಗಳಾದ ಕೆ.ಬಿ ಅಲಗರಾವುತ, ವಿ.ಡಿ ಸಕ್ರಿ, ಎಮ್.ಬಿ ಸಣ್ಣನಾಯ್ಕ, ಎ.ವಿ ಜೊತೆನ್ನವರ, ಬಿ.ಎಸ್ ಅಂತರಗಟ್ಟಿ, ಐ.ಎಸ್ ವಕ್ಕುಂದ, ಎಸ್.ಎಸ್ ಹುಂಬಿ ಮತ್ತು ಎಸ್.ಎಮ್ ಜವಳಿ ಇವರನ್ನೊಳಗೊಂಡ ತಂಡ 2 ಪ್ರಕರಣಗಳನ್ನು ಪತ್ತೆ ಮಾಡಿದ್ದು ಈ ತಂಡದಲ್ಲಿ ಇರುವ ಅಧಿಕಾರಿಗಳಿಗೆ ಹಾಗೂ ಎಲ್ಲ ಸಿಬ್ಬಂದಿ ಜನರಿಗೆ ಎಸ್.ಪಿ ಬೆಳಗಾವಿ ಜಿಲ್ಲೆ ಮತ್ತು ಹೆಚ್ಚುವರಿ ಎಸ್.ಪಿಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಬಂಡಾರದ ಜಾತ್ರೆ; ತಂದೆ ಚಿಕ್ಕಪ್ಪ, ಸ್ನೇಹಿತರೊಂದಿಗೆ ಯುವ ನಾಯಕ ಸಂತೋಷ್ ಜಾರಕಿಹೊಳಿ ಅವರು ಜಾತ್ರೆಯಲ್ಲಿ ಭಾಗಿ

Spread the loveಬಂಡಾರದ ಜಾತ್ರೆ; ತಂದೆ ಚಿಕ್ಕಪ್ಪ, ಸ್ನೇಹಿತರೊಂದಿಗೆ ಯುವ ನಾಯಕ ಸಂತೋಷ್ ಜಾರಕಿಹೊಳಿ ಅವರು ಜಾತ್ರೆಯಲ್ಲಿ ಭಾಗಿ ಜುಲೈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ