Breaking News

ಪ್ರಧಾನಿ ಮೋದಿ ಸೂಚನೆ ಮೇರೆಗೆ ಕರ್ನಾಟಕ – ಮಹಾರಾಷ್ಟ್ರ ರಾಜ್ಯಪಾಲರ ಸಭೆ

Spread the love

ಬೆಳಗಾವಿ: ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿಭಾಗದಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಇಂದು ಕೊಲಾಪುರದಲ್ಲಿ ಉಭಯ ರಾಜ್ಯಗಳ ರಾಜ್ಯಪಾಲರ ಸಭೆ ನಡೆಯುತ್ತಿದ್ದು, ರಾಜ್ಯದ ಜನರಲ್ಲಿ ಕುತೂಹಲ ಮೂಡಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಸೂಚನೆ ಮೇರೆಗೆ ಈ ಸಭೆ ನಡೆಯುತ್ತಿರುವುದು ಇನ್ನಷ್ಟು ಕುತೂಹಲಕ್ಕೆ ಕಾರಣವಾಗಿದೆ. ಕೊಲ್ಲಾಪುರಕ್ಕೆ ಆಗಮಿಸಿದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರನ್ನು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಾಯರಿ ಸ್ವಾಗತಿಸಿದರು. ಕೊಲ್ಲಾಪುರ ನಗರದ ಛತ್ರಪತಿ ಶಿವಾಜಿ ವಿಶ್ವವಿದ್ಯಾಲಯದ ಆವರಣದಲ್ಲಿ ಶುಕ್ರವಾರ ಬೆಳಗ್ಗೆ 11ಕ್ಕೆ ಜಂಟಿ ಸಭೆ ಆರಂಭವಾಗಿದೆ.

ಸಭೆಯಲ್ಲಿ ಉಭಯ ರಾಜ್ಯಗಳ ರಾಜ್ಯಪಾಲರಿಂದ ಗಡಿ ಭಾಗಗಳ ಸಮಸ್ಯೆ ಬಗ್ಗೆ ಚರ್ಚೆ ನಡೆಯಲಿದೆ. ಇದರಲ್ಲಿ ಪ್ರಮುಖವಾಗಿ ನೀರಾವರಿ, ಮೂಲಸೌಕರ್ಯ ವೃದ್ಧಿ, ರಸ್ತೆಗಳ ಅಭಿವೃದ್ಧಿ ಸೇರಿ ನಾನಾ ವಿಷಯಗಳ ಬಗ್ಗೆ ರಾಜ್ಯಪಾಲರು ಚರ್ಚೆ ನಡೆಸಲಿದ್ದಾರೆ. ಇನ್ನೂ ಸಭೆಯಲ್ಲಿ ಕರ್ನಾಟಕದ ಬೆಳಗಾವಿ, ಬೀದರ್, ವಿಜಯಪುರ, ಕಾರವಾರದ ಡಿಸಿ, ಎಸ್ಪಿ, ನೀರಾವರಿ ಇಲಾಖೆ ಅಧಿಕಾರಿಗಳು ಹಾಗೂ ಮಹಾರಾಷ್ಟ್ರದ ಗಡಿ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಎಸ್ಪಿಗಳು ಕೂಡ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಚರ್ಚೆಯ ವೇಳೆ ಮಹಾರಾಷ್ಟ್ರ ಗಡಿ ವಿವಾದವನ್ನು ಕೆದಕುವ ಸಾಧ್ಯತೆ ಇರುವುದರಿಂದ ಉಭಯ ರಾಜ್ಯದ ಜನರಲ್ಲಿ ಈ ಸಭೆ ಕುತೂಹಲಕ್ಕೆ ಕಾರಣವಾಗಿದೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ