Breaking News
Home / ಜಿಲ್ಲೆ / ಬಸವರಾಜ ಬೊಮ್ಮಾಯಿ ಗಡಿ ಉಸ್ತುವಾರಿ ಸಚಿವರಾಗಲಿ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಪತ್ರೆ

ಬಸವರಾಜ ಬೊಮ್ಮಾಯಿ ಗಡಿ ಉಸ್ತುವಾರಿ ಸಚಿವರಾಗಲಿ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಪತ್ರೆ

Spread the love

ಬೆಳಗಾವಿ – ಗಡಿ ಉಸ್ತುವಾರಿ ಸಚಿವರನ್ನಾಗಿ ಬಸವರಾಜ ಬೊಮ್ಮಾಯಿ ಅವರನ್ನು ನೇಮಕ ಮಾಡಬೇಕು ಎಂದು ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ.

ಜೊತೆಗೆ, ಮಹಾರಾಷ್ಟ್ರದ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದೆ.
ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಈ ಪತ್ರ ಬರೆದಿದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಣ ಗಡಿ ವಿವಾದ ಪ್ರಕರಣವನ್ನು ಮಹಾರಾಷ್ಟ್ರ ಸರಕಾರ ಪದೇ ಪದೇ ಕೆಣಕುತ್ತಿದೆ. ಅಲ್ಲಿಯ ಮುಖ್ಯಮಂತ್ರಿಗಳು ಸಾಧ್ಯವಿರುವ ಎಲ್ಲ ಅಸ್ತ್ರಗಳನ್ನು ಕರ್ನಾಟಕದ ವಿರುದ್ಧ ಬಳಸುತ್ತಿರುವುದು ತಮಗೂ ಗೊತ್ತಿರುವ ಸಂಗತಿಯಾಗಿದೆ. ೨೦೦೪ ರಿಂದ ಸರ್ವೋನ್ನತ ನ್ಯಾಯಾಲಯದ ಮುಂದಿರುವ ಈ ಪ್ರಕರಣದ ಬಗ್ಗೆ ಮಹಾರಾಷ್ಟ್ರವು ನ್ಯಾಯಾಲಯದ ಹೊರಗೆ ತನಗೆ ತೋಚಿದ ರೀತಿಯಲ್ಲಿ ಚಟುವಟಿಕೆಗಳನ್ನು ನಡೆಸುತ್ತಿದೆ. ಇದು ನ್ಯಾಯಾಂಗ ನಿಂದನೆಯ ಸ್ಪಷ್ಟವಾದ ಕ್ರಮವಾಗಿದೆ. ಮಹಾರಾಷ್ಟ್ರದ ಕ್ರಮವನ್ನು ನಿಯಂತ್ರಿಸಬೇಕಾದರೆ ನ್ಯಾಯಾಂಗ ನಿಂದನೆ ಪ್ರಕರಣವನ್ನು ಸರ್ವೋನ್ನತ ನ್ಯಾಯಾಲಯದಲ್ಲಿ ದಾಖಲಿಸುವುದೊಂದೇ ಮಾರ್ಗವಾಗಿದೆ. ಈ ದಿಸೆಯತ್ತ ತಾವು ಗಡಿ ಸಂರಕ್ಷಣಾ ಆಯೋಗ ಹಾಗೂ ಕಾನೂನು ತಜ್ಞರೊಂದಿಗೆ ಸಭೆ ನಡೆಸಿ ತುರ್ತಾಗಿ ಕ್ರಮ ಕೈಕೊಳ್ಳಬೇಕಾಗಿದೆ ಎಂದಿದ್ದಾರೆ.
ಗಡಿವಿವಾದ ಪ್ರಕರಣ ಹಾಗೂ ಗಡಿಗೆ ಸಂಬಂಧಿಸಿದ ಸಮಸ್ಯೆಗಳನ್ನು ನೋಡಿಕೊಳ್ಳಲು ಸದ್ಯ ಗಡಿ ಉಸ್ತುವಾರಿ ಸಚಿವರು ಯಾರೂ ಇಲ್ಲ. ಹಿಂದಿನ ಸಿದ್ಧರಾಯ್ಯ ಸರಕಾರದಲ್ಲಿ ನಮ್ಮ ಒತ್ತಾಯದ ಮೇರೆಗೆ ಎಚ್.ಕೆ. ಪಾಟೀಲ ಅವರನ್ನು ಗಡಿ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿತ್ತು. ೨೦೧೮ರ ವರೆಗೂ ಅವರು ಗಡಿ ವಿವಾದದ ಉಸ್ತುವಾರಿ ವಹಿಸಿದ್ದರು. ತದನಂತರ ಈ ಹೊಣೆಗಾರಿಕೆಯನ್ನು ಯಾರಿಗೂ ವಹಿಸಲಾಗಿಲ್ಲ. ಸದ್ಯ ಕಾನೂನು ಮತ್ತು ಸಂಸದಿಯ ಸಚಿವರಾಗಿರುವ ಬಸವರಾಜ ಬೊಮ್ಮಾಯಿಯವರು ಗಡಿ ವಿವಾದದ ಬಗ್ಗೆ ಸಾಕಷ್ಟು ತಿಳಿವಳಿಕೆವುಳ್ಳವರಾಗಿದ್ದಾರೆ. ಅಧ್ಯಯನ ಶೀಲರಾದ ಅವರನ್ನು ಗಡಿ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಬಹುದಾಗಿದೆ. ಈ ದಿಸೆಯತ್ತ ತಾವು ತುರ್ತಾಗಿ ಕ್ರಮಕೈಕೊಂಡಲ್ಲಿ ಗಡಿ ಭಾಗದ ಸಮಸ್ಯೆಗಳನ್ನು ಅವರ ಅವಗಾಹನೆಗೆ ತರಲು ನಮಗೆ ಸಾಧ್ಯವಾಗುತ್ತದೆ. ಮಹಾರಾಷ್ಟ್ರವು ಈಗಾಗಲೇ ಇಬ್ಬರು ಸಚಿವರನ್ನು ಗಡಿ ಉಸ್ತುವರಿಗಾಗಿ ನೇಮಿಸಿದೆ.
ಪರಿಸ್ಥಿತಿಯ ಗಂಭೀರತೆಯನ್ನು ಅರಿತುಕೊಂಡು ತಾವು ಈ ಸಂಬಂಧ ಕ್ರಮಕೈಕೊಳ್ಳಬೇಕು ಎಂದು ಕೋರಿದ್ದಾರೆ.


Spread the love

About Laxminews 24x7

Check Also

ಇಂದು, ನಾಳೆ ಬೆಂಗಳೂರಿನಲ್ಲಿ ಅಮಿತ್‌ ಶಾ, ಯೋಗಿ ರೋಡ್‌ ಶೋ

Spread the loveಬೆಂಗಳೂರು: ಮೊದಲನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯಕ್ಕೆ ದಿನಗಣನೆ ಪ್ರಾರಂಭವಾಗಿದ್ದು ಕೇಂದ್ರ ಗೃಹ ಸಚಿವ ಅಮಿತ್‌ ಶಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ