Breaking News

ಮೇ 9ರಂದು ಬಂಗಾಳದ ನೂತನ ಸಿಎಂ ಪ್ರಮಾಣ ಸ್ವೀಕಾರ – ಎಲ್ಲ NDA ಆಡಳಿತ ರಾಜ್ಯಗಳ ಸಿಎಂಗಳಿಗೆ ಆಹ್ವಾನ

Spread the love

ಕೋಲ್ಕತ್ತಾ: 15 ವರ್ಷಗಳ ದೀದಿ ಆಡಳಿತ ಕೊನೆಗೊಳಿಸಿ ಅಧಿಕೃತವಾಗಿ ಮೇ 9ರಂದು ಪಶ್ಚಿಮ ಬಂಗಾಳದಲ್ಲಿ ಮೊದಲ ಬಿಜೆಪಿ ಸರ್ಕಾರದ ನೂತನ ಸಿಎಂ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಬಿಜೆಪಿ ಪಶ್ಚಿಮ ಬಂಗಾಳ ರಾಜ್ಯಾಧ್ಯಕ್ಷ ಸಮಿಕ್ ಭಟ್ಟಾಚಾರ್ಯ ಅವರು ಈ ಕುರಿತು ಮಾಧ್ಯಮವೊಂದಕ್ಕೆ ಮಾಹಿತಿ ನೀಡಿದ್ದಾರೆ. ಮೇ 9ರಂದು ರವೀಂದ್ರನಾಥ ಠ್ಯಾಗೋರ್ ಅವರ ಜನ್ಮದಿನವಿದ್ದು, ಅಂದೇ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚಿಸಲು ನಿರ್ಧರಿಸಿದೆ. ಪ್ರಮಾಣ ವಚನ ಸಮಾರಂಭಕ್ಕೆ ಎನ್‌ಡಿಎ ಆಡಳಿತವಿರುವ ಎಲ್ಲ ರಾಜ್ಯಗಳ ಸಿಎಂಗಳಿಗೆ ಆಹ್ವಾನಿಸಿದ್ದಾರೆ

ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಬಿಜೆಪಿಯು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಅನ್ನು ಬದಿಗೊತ್ತಿ, ಮಮತಾ ಬ್ಯಾನರ್ಜಿಯವರ 15 ವರ್ಷಗಳ ಅಧಿಪತ್ಯವನ್ನು ಕೊನೆಗೊಳಿಸಿದೆ. ಈ ಮೂಲಕ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯು ಮೊದಲ ಬಾರಿಗೆ ಸರ್ಕಾರ ರಚಿಸಲಿದೆ.

ಬಂಗಾಳದ ಗೆಲುವು ಐತಿಹಾಸಿಕ ಎಂದ ಮೋದಿ:
ಅಭೂತಪೂರ್ವ ಗೆಲುವಿನ ಬಳಿಕ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಪಶ್ಚಿಮ ಬಂಗಾಳದ ಗೆಲುವು ಐತಿಹಾಸಿಕ ಎಂದಿದ್ದರು. ಈ ಜನಾದೇಶವು ಜನರ ಬದಲಾವಣೆ ಮತ್ತು ಭಯದಿಂದ ಮುಕ್ತ ಭವಿಷ್ಯದ ಬಯಕೆಯನ್ನು ಪ್ರತಿಬಿಂಬಿಸುತ್ತದೆ. ಈ. ಫಲಿತಾಂಶದ ಹಿಂದೆ ಮಹಿಳಾ ಮತದಾರರು ನಿರ್ಣಾಯಕ ಶಕ್ತಿಯಿದೆ. ಜೊತೆಗೆ ರಾಜಕೀಯ ಹಿಂಸಾಚಾರವನ್ನು ಕೊನೆಗಾಣಿಸಲು ಜನರು ನಿರ್ಧರಿಸಿದ್ದಾರೆ ಎಂದಿದ್ದರು.

294 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಪಶ್ಚಿಮ ಬಂಗಾಳದಲ್ಲಿ ಸರ್ಕಾರ ರಚಿಸಲು 148 ಬಹುಮತದ ಅವಶ್ಯಕತೆಯಿದೆ. ಈ ಪೈಕಿ 204 ಕ್ಷೇತ್ರಗಳಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ.


Spread the love

About Laxminews 24x7

Check Also

ಜೂನ್ 20-21ಕ್ಕೆ ಮತ್ತೆ 6 ಜಿಲ್ಲೆಗಳಿಗೆ ಮುಂಗಾರು ಚುರುಕು – ಯೆಲ್ಲೋ ಅಲರ್ಟ್

Spread the loveಜೂನ್ 20 ಹಾಗೂ 21 ರಂದು ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರಿಗೆ ಭಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ