ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ವಾಸವಾಗಿದ್ದ ಬಾಂಗ್ಲಾ ಪ್ರಜೆಗಳ ಅಡಗುತಾಣಗಳ ಮೇಲೆ ಪೊಲೀಸರು ಭರ್ಜರಿ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಸುಮಾರು 20 ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದಿದ್ದಾರೆ.
ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ಆದೇಶದ ಮೇರೆಗೆ ಈ ವಿಶೇಷ ಕಾರ್ಯಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಾರ್ವಜನಿಕರಿಂದ ಬಂದ ಖಚಿತ ಮಾಹಿತಿ ಆಧರಿಸಿ, ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಬೆಂಗಳೂರಿನ ಹಲವು ಭಾಗಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಯಿತು.
ರಾಮಮೂರ್ತಿ ನಗರ, ಯಲಹಂಕ ಮತ್ತು ಬಾಗಲೂರು ಠಾಣಾ ವ್ಯಾಪ್ತಿಗಳಲ್ಲಿ ಒಂದೇ ದಿನದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ನಿರ್ದಿಷ್ಟವಾಗಿ, ಬೆಲ್ಲಹಳ್ಳಿ ಗಾರ್ಬೆಜ್ ಪಾಯಿಂಟ್ ಬಳಿಯ ಅಕ್ರಮ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ಶೋಧ ನಡೆಸಲಾಯಿತು. ಅನುಮಾನಾಸ್ಪದವಾಗಿ ಕಂಡುಬಂದ ಸುಮಾರು 20 ಜನರನ್ನು ಬಾಗಲೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ, ವಶಕ್ಕೆ ಪಡೆದವರು ತಾವು ಬಾಂಗ್ಲಾದೇಶದ ಪ್ರಜೆಗಳು ಎಂದು ತಪ್ರೊಪ್ಪಿಕೊಂಡಿದ್ದಾರೆ. ಅಕ್ರಮವಾಗಿ ನೆಲೆಸಿದ್ದ ಇವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಸಿದ್ಧತೆ ನಡೆಸಲಾಗಿದೆ.
ನಗರದಲ್ಲಿ ಅಕ್ರಮವಾಗಿ ನೆಲೆಸಿರುವ ಇತರ ಬಾಂಗ್ಲಾ ವಲಸಿಗರ ಪತ್ತೆಗಾಗಿ ಪೊಲೀಸರ ಕಾರ್ಯಾಚರಣೆ ಸದ್ಯವೂ ಮುಂದುವರಿದಿದೆ.
Laxmi News 24×7