Breaking News

ಬೆಂಗಳೂರು ವಕೀಲ ಮಂಜುನಾಥ್ ಶೂಟೌಟ್ ಪ್ರಕರಣ – ಪ್ರಮುಖ ಆರೋಪಿ ಬಂಧನ

Spread the love

ಬೆಂಗಳೂರು: ಬೆಂಗಳೂರಿನ ವಕೀಲ ಮಂಜುನಾಥ್ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಅಮಿತ್ ಕುಮಾರ್ ದುಬೆಯನ್ನು ವೈಟ್‌ಫೀಲ್ಡ್ ಪೊಲೀಸರು ಬಂಧಿಸಿದ್ದಾರೆ.

ಅಕ್ಟೋಬರ್ 19ರಂದು ವಕೀಲ ಮಂಜುನಾಥ್ ಅವರನ್ನು ಗುಂಡಿಕ್ಕಿ ಹತ್ಯೆಗೈದು ಆರೋಪಿಗಳು ತಲೆಮರೆಸಿಕೊಂಡಿದ್ದರು. ಆರೋಪಿಗಳ ಪತ್ತೆಗಾಗಿ ಹಲವು ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ತಮಿಳುನಾಡು, ತೆಲಂಗಾಣ, ಬಿಹಾರ ಹಾಗೂ ದೆಹಲಿಯಲ್ಲಿ ಪೊಲೀಸರು ಹುಡುಕಾಟ ನಡೆಸಿದ್ದರು.

ಇದೀಗ ಘಟನೆ ನಡೆದು ಸುಮಾರು ಒಂದು ತಿಂಗಳ ಬಳಿಕ ಬಿಹಾರದಲ್ಲಿ ತಲೆಮರೆಸಿಕೊಂಡಿದ್ದ ಅಮಿತ್ ಕುಮಾರ್ ದುಬೆಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣದ ಮತ್ತೊಬ್ಬ ಆರೋಪಿ ಪವನ್ ಕುಮಾರ್ ದುಬೆಗಾಗಿ ಪೊಲೀಸರ ಶೋಧ ಕಾರ್ಯ ಮುಂದುವರಿದಿದೆ.


Spread the love

About Laxminews 24x7

Check Also

ಅಡುಗೆ ಎಣ್ಣೆ ಮರುಬಳಕೆಗೆ ಸರ್ಕಾರ ನಿರ್ಬಂಧ – ಶೀಘ್ರದಲ್ಲೇ ಹೊಸ ಆ್ಯಪ್ ಬಿಡುಗಡೆ

Spread the loveಬೆಂಗಳೂರು: ಅಡುಗೆ ಎಣ್ಣೆ  ಮರುಬಳಕೆ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ  ದಿಟ್ಟ ಹೆಜ್ಜೆ ಇಟ್ಟಿದೆ. ಹೋಟೆಲ್‌ಗಳಲ್ಲಿ ಇನ್ಮುಂದೆ ಅಡುಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ