Breaking News
Home / Uncategorized / ಬೆಂಗಳೂರಿನಲ್ಲಿ ಸೆ. 25ರವರೆಗೂ ಗುಡುಗು ಸಹಿತ ಭಾರೀ ಮಳೆ; ಸಂಜೆ ಬೇಗ ಮನೆ ಸೇರಿಕೊಳ್ಳಿ!

ಬೆಂಗಳೂರಿನಲ್ಲಿ ಸೆ. 25ರವರೆಗೂ ಗುಡುಗು ಸಹಿತ ಭಾರೀ ಮಳೆ; ಸಂಜೆ ಬೇಗ ಮನೆ ಸೇರಿಕೊಳ್ಳಿ!

Spread the love

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bangalore Rain) ಒಂದು ಗಂಟೆ ಮಳೆ ಸುರಿದರೂ ಜನಜೀವನ ಅಸ್ತವ್ಯಸ್ತವಾಗಿ ಬಿಡುತ್ತದೆ. ಚರಂಡಿ ವ್ಯವಸ್ಥೆ, ರಾಜಕಾಲುವೆಗಳ ಅವ್ಯವಸ್ಥೆ, ತಗ್ಗು ಪ್ರದೇಶದಲ್ಲಿ ಮನೆಗಳನ್ನು ನಿರ್ಮಾಣ ಮಾಡಿರುವುದು ಹೀಗೆ ನಾನಾ ಕಾರಣಗಳಿಂದ ಮಳೆಗಾಲದಲ್ಲಿ ಬೆಂಗಳೂರಿಗರಿಗೆ ನರಕ ದರ್ಶನವಾಗುತ್ತಲೇ ಇರುತ್ತದೆ. ಇಂದಿನಿಂದ ಸೆ. 25ರವರೆಗೂ ಬೆಂಗಳೂರಿನಲ್ಲಿ ಮತ್ತೆ ಮಳೆ (Heavy Rain in Bengaluru) ಜೋರಾಗಲಿದ್ದು, ಇಂದಿನಿಂದ 5 ದಿನ ಗುಡುಗು- ಮಿಂಚು (Bengaluru Rains) ಸಹಿತ ಭಾರೀ ಮಳೆಯಾಗಲಿದೆ. ಈಗಾಗಲೇ ಬೆಳಗ್ಗೆಯಿಂದ ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಭಾಗದಲ್ಲಿ ಮಳೆಯ ಆರ್ಭಟ ಜೋರಾಗಿದೆ. ಬೆಂಗಳೂರಿನಲ್ಲೂ ಇಂದು ಸಂಜೆಯ ಬಳಿಕ ಮಳೆ ಶುರುವಾಗುವ ಸಾಧ್ಯತೆಯಿದ್ದು, ಸೆ. 24ರಿಂದ 2 ದಿನ ಮಿಂಚು ಸಹಿತ ಭಾರೀ ಮಳೆಯಾಗಲಿದೆ.

ಸುಮಾರು 2 ವಾರಗಳಿಂದ ಬೆಂಗಳೂರಿನಲ್ಲಿ ಕಡಿಮೆಯಾಗಿದ್ದ ಮಳೆಯ ಆರ್ಭಟ ಕಳೆದ 2-3 ದಿನಗಳಿಂದ ಮತ್ತೆ ಶುರುವಾಗಿದೆ. ನಿನ್ನೆ ಕೂಡ ಸಿಲಿಕಾನ್ ಸಿಟಿಯಲ್ಲಿ ಭಾರೀ ಮಳೆಯಾಗಿದ್ದು, ಬನಶಂಕರಿ, ಬಸವನಗುಡಿ, ಜಯನಗರ, ಕತ್ರಿಗುಪ್ಪೆ, ವಿಧಾನಸೌಧ, ಕೆ.ಆರ್​ ರಸ್ತೆ, ಮೆಜೆಸ್ಟಿಕ್, ಶೇಷಾದ್ರಿಪುರಂ. ಮಲ್ಲೇಶ್ವರಂ, ಹೆಬ್ಬಾಳ, ರಾಜಾಜಿನಗರ, ಜೆಪಿ ನಗರ, ಕೋರಮಂಗಲ, ಆರ್​.ಆರ್ ನಗರ, ಕೆ.ಆರ್. ಮಾರ್ಕೆಟ್, ಶಿವಾಜಿನಗರ, ಶಾಂತಿನಗರ, ಎಲೆಕ್ಟ್ರಾನಿಕ್ ಸಿಟಿ, ಕೆಂಗೇರಿ ಮುಂತಾದ ಏರಿಯಾಗಳಲ್ಲಿ ಮಳೆಯಿಂದ ರಸ್ತೆಗಳು ಹೊಳೆಯಂತಾಗಿದ್ದವು. ಅತ್ತ ವಿಧಾನಸೌಧದೊಳಗೂ ನೀರು ನುಗ್ಗಿ, ಕಚೇರಿ, ವರಾಂಡಗಳಲ್ಲಿ ನೀರು ತುಂಬಿಕೊಂಡಿತ್ತು.

ಬೆಂಗಳೂರಿನಲ್ಲಿ ಇಂದಿನಿಂದ ಸೆ. 25ರವರೆಗೂ ಮಳೆಯ ಆರ್ಭಟ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಸೆ. 26ರಂದು ಸಿಲಿಕಾನ್ ಸಿಟಿಯಲ್ಲಿ ಸಾಧಾರಣ ಮಳೆಯಾಗಲಿದೆ. ಹಾಗೇ, ಬೆಂಗಳೂರು ಮಾತ್ರವಲ್ಲದೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯದಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (KSNDMC)ದ ಪ್ರಕಾರ, ಬೆಂಗಳೂರಿನಲ್ಲಿ ವಿದ್ಯಾರಣ್ಯಪುರ ಮತ್ತು ಯಲಹಂಕದಲ್ಲಿ ಅತಿ ಹೆಚ್ಚು ಮಳೆ ದಾಖಲಾಗಿದೆ. ಉಳಿದಂತೆ ಕೋರಮಂಗಲ, ಹೊರಮಾವು, ದೊಡ್ಡ ಬೊಮ್ಮಸಂದ್ರ, ಕೊಡಿಗೇಹಳ್ಳಿಯಲ್ಲಿ ಕೂಡ ಮಳೆ ಹೆಚ್ಚಾಗಿದೆ. ಇಂದಿನಿಂದ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವುದರಿಂದ ಬಿಬಿಎಂಪಿಯಿಂದ ಕಂಟ್ರೋಲ್ ರೂಂ ತೆರೆಯಲಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ ಹೆಚ್ಚಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ಮಳೆಯಿಂದ ಹಳದಿ ಅಲರ್ಟ್​ ಘೋಷಿಸಲಾಗಿದೆ. ಸೆಪ್ಟೆಂಬರ್ ಕೊನೆಯ ವಾರದವರೆಗೂ ಮಲೆನಾಡು, ಕರಾವಳಿ, ಕೊಡಗಿನಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ. ಅತ್ತ ಉತ್ತರ ಭಾರತದಲ್ಲೂ ಮಳೆ ಹೆಚ್ಚಾಗಿದ್ದು, ಹಲವು ರಾಜ್ಯಗಳಲ್ಲಿ ಪ್ರವಾಹದ ಆತಂಕ ಎದುರಾಗಿದೆ. ಗುಜರಾತ್​ನಲ್ಲಿ ಇಂದಿನಿಂದ 4 ದಿನ ಅಂದರೆ ಸೆ. 24ರವರೆಗೂ ಮಳೆ ಮುಂದುವರೆಯಲಿದೆ. ನೆರೆಯ ರಾಜ್ಯವಾದ ಕೇರಳದಲ್ಲಿ ಸೆ. 23ರಂದು ವಿಪರೀತ ಮಳೆಯಾಗಲಿದೆ.

 

 

ಇಂದಿನಿಂದ ಸೆಪ್ಟೆಂಬರ್ 24ರವರೆಗೆ ಕರ್ನಾಟಕದಲ್ಲಿ ಮಳೆ ಸುರಿಯಲಿದೆ. ಹೀಗಾಗಿ ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಭಾರೀ ಮಳೆ ಸುರಿಯಲಿದೆ. ಮುಖ್ಯವಾಗಿ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇನ್ನೂ 4 ದಿನ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಸೇರಿದಂತೆ ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಇನ್ನೆರಡು ದಿನ ಸಾಧಾರಣ ಮಳೆಯಾಗಲಿದೆ.

ಕರ್ನಾಟಕ ಮಾತ್ರವಲ್ಲದೆ, ರಾಜಸ್ಥಾನ, ಗುಜರಾತ್, ತಮಿಳುನಾಡು, ಪಶ್ಚಿಮ ಬಂಗಾಳ, ಒರಿಸ್ಸಾ, ಉತ್ತರಾಖಂಡ, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಸಿಕ್ಕಿಂ, ಸೌರಾಷ್ಟ್ರ, ಕಚ್, ಮಹಾರಾಷ್ಟ್ರ, ಗೋವಾ, ಅಂಡಮಾನ್ ನಿಕೋಬಾರ್, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಜಾರ್ಖಂಡ್, ಬಿಹಾರ, ಕೊಂಕಣ, ಉತ್ತರ ಪ್ರದೇಶ, ಆಂಧ್ರ ಪ್ರದೇಶ, ತೆಲಂಗಾಣ, ಕೇರಳ, ಲಕ್ಷದ್ವೀಪದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ. ಪಂಜಾಬ್, ಹರಿಯಾಣ, ದೆಹಲಿ, ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ, ಲಡಾಖ್​ನಲ್ಲಿ ಇಂದು ಮಳೆ ಸುರಿಯಲಿದೆ.

 


Spread the love

About Laxminews 24x7

Check Also

ನಿನ್ನ ಮಗನಿಂದ ಇಂಥ ಕಪ್ಪು ಚುಕ್ಕೆ ಬಂತು; ರೇವಣ್ಣ ಮೇಲೆ ಮುಗಿಬಿದ್ದ ಎಚ್‌ಡಿಡಿ, ಎಚ್‌ಡಿಕೆ

Spread the loveಬೆಂಗಳೂರು: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ