Breaking News

ಶಾಹೀನ್ ಚಂಡಮಾರುತ- ಅ.3ರ ವರೆಗೆ ರಾಜ್ಯದಲ್ಲಿ ಭಾರೀ ಮಳೆ

Spread the love

ಬೆಂಗಳೂರು: ಶಾಹೀನ್ ಚಂಡಮಾರುತ ಹಿನ್ನೆಲೆ ಇಂದಿನಿಂದ ಅಕ್ಟೋಬರ್ 3 ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಾಳೆ ಶಾಹೀನ್ ಚಂಡಮಾರುತ ಅಪ್ಪಳಿಸುವ ಹಿನ್ನೆಲೆಯಲ್ಲಿ ಇಂದಿನಿಂದ ಕರ್ನಾಟಕದಲ್ಲೂ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಅ.3ರ ವರೆಗೂ ಕರ್ನಾಟಕದ ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

 

ಇಂದಿನಿಂದ ಅ.3 ರವರೆಗೆ ಉಡುಪಿ, ಬಳ್ಳಾರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ಬೀದರ್, ಕಲಬುರ್ಗಿ, ವಿಜಯಪುರದಲ್ಲಿ ಇಂದಿನಿಂದ 4 ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

 


Spread the love

About Laxminews 24x7

Check Also

ಪರಿಸರ ದಿನಾಚರಣೆ ಮುನ್ನಾ ದಿನ ಅರಣ್ಯ ಪ್ರದೇಶದಲ್ಲಿ ಮಕ್ಕಳ ಸಂಭ್ರಮ ವಿಶ್ವ ಪರಿಸರ ದಿನಾಚರಣೆ ಹಿನ್ನೆಲೆ ಸಸಿ ನೆಟ್ಟ ಮಕ್ಕಳು

Spread the love ಪರಿಸರ ದಿನಾಚರಣೆ ಮುನ್ನಾ ದಿನ ಅರಣ್ಯ ಪ್ರದೇಶದಲ್ಲಿ ಮಕ್ಕಳ ಸಂಭ್ರಮ ವಿಶ್ವ ಪರಿಸರ ದಿನಾಚರಣೆ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ