Breaking News

ಏರೋ‌ ಇಂಡಿಯಾ 2021 ಚಾಲನೆಗೆ ಕ್ಷಣಗಣನೆ : ಟ್ರಾಫಿಕ್ ದಟ್ಟಣೆ

Spread the love

ಬೆಂಗಳೂರು    ಐತಿಹಾಸಿಕ‌ 13ನೇ ಆವೃತ್ತಿಯ ಏರೋ ಇಂಡಿಯಾ 2021ಗೆ ಕ್ಷಣಗಣನೆ ಆರಂಭವಾಗಿದ್ದು, ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್‌ ಏರೋ‌ ಇಂಡಿಯಾ 2021 ಉದ್ಘಾಟಿಸಲಿದ್ದಾರೆ.. ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ‌ ಹಲವಾರು ಗಣ್ಯರು ಭಾಗಿಯಾಗಲಿದ್ದಾರೆ. ಫೆ.3ರಿಂದ 5ರ ತನಕ ಏರ್​​ ಶೋ ನಡೆಯಲಿದೆ. ಏರ್ ಶೋ ವೀಕ್ಷಿಸಲು ಸಾರ್ವಜನಿಕರಿಗೂ ಅವಕಾಶವಿದ್ದು, ಬೆಳ್ಳಂಬೆಳಗ್ಗೆಯೇ ಹೆಬ್ಬಾಳದ ಎಸ್ಟೀಮ್ ಮಾಲ್‌ ಬಳಿಯಿಂದಲೇ ಟ್ರಾಫಿಕ್ ಜಾಮ್‌ ಶುರುವಾಗಿದೆ. ಸಾರ್ವಜನಿಕರು ಏರ್ ಶೋ ವೀಕ್ಷಿಸಲು ಕೋವಿಡ್ ಪರೀಕ್ಷೆಯನ್ನ ಕಡ್ಡಾಯವಾಗಿ ಮಾಡಿಸಿಕೊಂಡೆ ಪ್ರವೇಶ ಪಡೆಯಬೇಕು ಎಂದು ಭಾರತ ಸರ್ಕಾರ ಕಡ್ಡಾಯಗೊಳಿಸಿದೆ.. 9.30ಕ್ಕೆ ಪ್ರಾರಂಭವಾಗುವ ಈ ಅಂತಾರಾಷ್ಟ್ರಿಯ ಸಮಾರಂಭಕ್ಕೆ ವಿಶ್ವದ ವಿವಿಧ ರಾಷ್ಟ್ರಗಳಿಂದ ರಕ್ಷಣಾ ಪ್ರತಿನಿಧಿಗಳು ಈಗಾಗಲೇ ಆಗಮಿಸಿದ್ದಾರೆ..


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ