Breaking News

ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ 3.39 ಕೋಟಿ ಮೌಲ್ಯದ ಗಾಂಜಾ ಸೀಜ್‌

Spread the love

ಬೆಂಗಳೂರು: ಇಲ್ಲಿನ ಕೆಂಪೆಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ಕಸ್ಟಮ್ಸ್ ಅಧಿಕಾರಿಗಳು ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 3.39 ಕೋಟಿ ರೂ. ಮೌಲ್ಯದ ಹೈಡ್ರೋಫೋನಿಕ್‌ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.

ಬ್ಯಾಂಕಾಕ್‌ನಿಂದ ಬೆಂಗಳೂರಿಗೆ  ಬಂದಿದ್ದ ಪ್ರಯಾಣಿಕನ ಲಗೇಜ್ ಪರಿಶೀಲನೆ ವೇಳೆ ಬ್ಯಾಗ್‌ನಲ್ಲಿ 9.7 ಕೆಜಿ ಗಾಂಜಾ ಪತ್ತೆಯಾಗಿದೆ. ಗಾಂಜಾ ಸಮೇತ ಪ್ರಯಾಣಿಕನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಸಂಬಂಧ ಎನ್‌ಡಿಪಿಎಸ್ ಕಾಯ್ದೆಯಡಿ ಕಸ್ಟಮ್ಸ್ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.

ಫೆ.7 ರಂದು ಸಹ ಕಸ್ಟಮ್ಸ್ ಅಧಿಕಾರಿಗಳು ಎರಡು ಪ್ರತ್ಯೇಕ ಪ್ರಕರಣದಲ್ಲಿ ಸುಮಾರು 3 ಕೋಟಿ ರೂ. ಮೌಲ್ಯದ ಗಾಂಜಾವನ್ನು ವಶಕ್ಕೆ ಪಡೆದಿದ್ದರು.


Spread the love

About Laxminews 24x7

Check Also

ನೈಟ್‌ ಔಟ್‌ ವೇಳೆ ಬೈಕ್‌ಗೆ ಲಾರಿ ಡಿಕ್ಕಿ – ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು

Spread the loveನೆಲಮಂಗಲ: ಬಿರಿಯಾನಿ ತಿನ್ನಲು ಹೋಗ್ತಿದ್ದಾಗ ಬೈಕ್‌ಗೆ ಲಾರಿ ಡಿಕ್ಕಿಯಾಗಿ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನಪ್ಪಿರುವ ಘಟನೆ ನೆಲಮಂಗಲ-ಹಾಸನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ