Breaking News

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love

ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು ಅತ್ಯಂತ ಪ್ರಖರವಾಗಿವೆ ಎಂದು ಹಿರಿಯ ಸಾಹಿತಿ ಡಾ.ರಾಘವೇಂದ್ರ ಪಾಟೀಲ ಹೇಳಿದರು.

ಡಾ.ಬೆಟಗೇರಿ ಕೃಷ್ಣಶರ್ಮ ಟ್ರಸ್ಟ್ ಹಾಗೂ ಮಹಾಂತೇಶ ನಗರ ರಹವಾಸಿಗಳ ಸಂಘದ ಶಿಕ್ಷಣ ಮಹಾವಿದ್ಯಾಲಯದ ಸಹಯೋಗದಲ್ಲಿ ಗುರುವಾರ ಮಹಾಂತ ಭವನದಲ್ಲಿ ಏರ್ಪಡಿಸಿದ್ದ ಡಾ.ಬೆಟಗೇರಿ ಕೃಷ್ಣ್ಣಶರ್ಮ ಜಯಂತಿ ಹಾಗೂ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ನವೋದಯದ ಪ್ರತಿಭಾವಂತ ಕವಿಯಾಗಿದ್ದ ಕೃಷ್ಣಶರ್ಮರು ಕಾವ್ಯಗಳಲ್ಲಿ ಸ್ತ್ರೀಗೆ ಅತ್ಯಂತ ಪ್ರಮುಖ ಪಾತ್ರ ನೀಡಿದ್ದಾರೆ. ಒಡನಾಡಿ ಎಂಬುದು ಗಂಡಿನ ಪ್ರಜ್ಞೆಯಾದರೆ, ಗೃಹಿಣಿ ಎನ್ನುವುದು ಸ್ತ್ರೀ ಪ್ರಜ್ಞೆ ಎಂದು ತಮ್ಮ ಕಾವ್ಯಗಳಲ್ಲಿ ನಮೂದಿಸಿದ್ದಾರೆ ಎಂದು ವಿಶ್ಲೇಷಿಸಿದರು.
ಡಾ.ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಡಾ.ಸರಜೂ ಕಾಟ್ಕರ್, ಧಾರವಾಡ ಅಂಜುಮನ್ ಪದವಿ ಕಾಲೇಜಿನ ಕನ್ನಡ ಸಹ ಪ್ರಾಧ್ಯಾಪಕ ಡಾ.ರುದ್ರೇಶ ಮೇಟಿ, ಡಾ.ಬೆಟಗೇರಿ ಕೃಷ್ಣಶರ್ಮ ಟ್ರಸ್ಟ್  ಅಧ್ಯಕ್ಷೆ ಡಾ.ವಿನಯಾ ವಕ್ಕುಂದ ಮಾತನಾಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಕೆ.ಎಚ್.ಚನ್ನೂರ, ಮಹಾಂತೇಶ ನಗರ ರಹವಾಸಿಗಳ ಸಂಘ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ನಿರ್ಮಲಾ ಬಟ್ಟಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಬಸವರಾಜ ಕಟ್ಟಿಮನಿ ಟ್ರಸ್ಟ್ ಅಧ್ಯಕ್ಷ ಡಾ.ಯಲ್ಲಪ್ಪ ಹಿಮ್ಮಡಿ, ಡಾ.ಎಚ್.ಬಿ.ಕೋಲ್ಕಾರ, ಡಾ.ಗೀತಾಂಜಲಿ ಕುರುಡಗಿ, ರವಿ ಕುಲಕರ್ಣಿ ಇತರರಿದ್ದರು.

Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ