Breaking News

ವಿಡಿಯೋ ಕಾಲ್ ಮಾಡಿದ ವೈದ್ಯಾಧಿಕಾರಿ- ಮನೆಗೆ ಯಾವಾಗ ಬರ್ತಿಯಪ್ಪಾ ಎಂದ ಮಕ್ಕಳು

Spread the love

ಬಾಗಲಕೋಟೆ: ಕೊರೊನಾ ಯುದ್ಧದಲ್ಲಿ ತಿಂಗಳುಗಟ್ಟಲೇ ಪತ್ನಿ, ಮಕ್ಕಳು ತಂದೆ ತಾಯಿಯಿಂದ ದೂರವಾದ ಜಿಲ್ಲಾಸ್ಪತ್ರೆಯ ವೈದ್ಯರೊಬ್ಬರು ವಿಡಿಯೋ ಕಾಲ್ ಮೂಲಕ ಕುಟುಂಬಸ್ಥರ ಕುಶಲೋಪರಿ ವಿಚಾರಿಸಿದರು.

ಬಾಗಲಕೋಟೆ ಕೋವಿಡ್ ಆಸ್ಪತ್ರೆಯಲ್ಲಿ ನೂಡಲ್ ಅಧಿಕಾರಿಯಾಗಿರುವ ಚಂದ್ರಕಾಂತ ಜವಳಿ ಕಳೆದ ಒಂದೂವರೆ ತಿಂಗಳಿಂದ ಕೊರೊನಾ ಪ್ರಕರಣಗಳ ಮಾಹಿತಿ ಅಂಕಿ ಅಂಶ ದಾಖಲಾತಿ ಕಾರ್ಯ ನಿಭಾಯಿಸುತ್ತಿದ್ದಾರೆ. ಹೀಗಾಗಿ ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ಪಟ್ಟಣದಲ್ಲಿರುವ ತಂದೆ, ತಾಯಿ, ಪತ್ನಿ ಮಕ್ಕಳ ಭೇಟಿ ಮಾಡಿಲ್ಲ. ಕೊರೊನಾ ಕರ್ತವ್ಯದಲ್ಲಿರುವ ವೈದ್ಯ ಚಂದ್ರಕಾಂತ ಕುಟುಂಬ ಜೊತೆಗಿನ ಸಂಭ್ರಮ ತ್ಯಾಗ ಮಾಡಿದ್ದಾರೆ. ಕುಟುಂಬಸ್ಥರನ್ನು ಮಿಸ್ ಮಾಡಿಕೊಳ್ಳುತ್ತಿದ್ದ ಚಂದ್ರಕಾಂತ, ವಿಡಿಯೋ ಕಾಲ್ ಮಾಡಿ ಮಾತನಾಡಿ ದೂರದಿಂದಲೇ ಸಂತಸ ಪಟ್ಟಿದ್ದಾರೆ.

ಪತ್ನಿ, ಮಕ್ಕಳು, ತಂದೆ, ತಾಯಿ ಜೊತೆ ಮಾತನಾಡಿದ್ದು, ಕೆಲ ಕಾಲ ಮಾತನಾಡುವ ಮೂಲಕ ಸಂತಸದ ಕ್ಷಣಗಳನ್ನು ಕಳೆದಿದ್ದಾರೆ. ಈ ವೇಳೆ ಮಕ್ಕಳು ಮನೆಗೆ ಬಾ ಎಂದು ಕರೆದಿದ್ದು, ಕೊರೊನಾ ಹಾವಳಿ ಮುಗಿದ ನಂತರ ಬರುತ್ತೇನೆ ಎಂದು ಹೇಳಿದ್ದಾರೆ. ಸಧ್ಯ ಒಂದೂವರೆ ತಿಂಗಳಿನಿಂದ ಬಾಗಲಕೋಟೆಯ ಖಾಸಗಿ ಲಾಡ್ಜ್ ನಲ್ಲಿಯೇ ಚಂದ್ರಕಾಂತ ಉಳಿದುಕೊಂಡಿದ್ದಾರೆ. ವೈದ್ಯರ ಕುಟುಂಬದದಿಂದ ದೂರ ಉಳಿದು ಕೆಲಸ ಮಾಡುತ್ತಿರುವುದಕ್ಕೆ ಸರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಲು ಮಾಧ್ಯಮದವರು ಕೇಳಿದಾಗ ದಯವಿಟ್ಟು ಬೇಡ. ನನ್ನಂತೆ ಸಾಕಷ್ಟು ಜನ ಮನೆಗೆ ತೆರಳದೇ ಕಾರ್ಯನಿರ್ವಹಿಸುತ್ತಿದ್ದಾರೆ. ಹೀಗಾಗಿ ಮುಜುಗುರ ಉಂಟಾಗೋದು ಬೇಡ ಎಂದಿದ್ದಾರೆ.


Spread the love

About Laxminews 24x7

Check Also

ಕಳ್ಳರನ್ನು ಓಡಿಸಲು ದಿಟ್ಟತನ ಮೆರೆದ ಮಹಿಳೆ ಪೃಥ್ವಿ ಸಮಯ ಪ್ರಜ್ಞೆಯಿಂದ ಜಿರಲೆ ಸ್ಪ್ರೇ ಸಿಂಪಡಿಸಿ ಕಳ್ಳರನ್ನು ಓಡಿಸಿದ ಮಹಿಳೆ…!!!

Spread the love ಕಳ್ಳರನ್ನು ಓಡಿಸಲು ದಿಟ್ಟತನ ಮೆರೆದ ಮಹಿಳೆ ಪೃಥ್ವಿ ಸಮಯ ಪ್ರಜ್ಞೆಯಿಂದ ಜಿರಲೆ ಸ್ಪ್ರೇ ಸಿಂಪಡಿಸಿ ಕಳ್ಳರನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ