ಬಾಗಲಕೋಟೆ: ಮಗನಿಗೆ ಕೊರೊನಾ ಸೋಂಕಿರುವ ವಿಷಯ ತಿಳಿಯುತ್ತಿದ್ದಂತೆ ರೋಗಿ ನಂ.381 ಅವರ 70 ವರ್ಷದ ತಾಯಿ ಹೃದಯಾಘಾತದಿಂದ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಬಾಗಲಕೋಟೆ ಜಿಲ್ಲೆಂಯ ಜಮಖಂಡಿಯಲ್ಲಿ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ನಿವಾಸಿಯಾಗಿರುವ ಸೋಂಕಿತ ತಾಯಿ, ಹೃದಯಸಂಬಂಧಿ ಖಾಯಿಲೆ, ರಕ್ತದೊತ್ತಡದಿಂದ ಬಳಲುತ್ತಿದ್ದರು. ಇತ್ತೀಚೆಗೆ ಜಮಖಂಡಿ ಖಾಸಗಿ ಆಸ್ಪತ್ರೆಯಲ್ಲಿ ಒಂದು ದಿನ ದಾಖಲಾಗಿ ಡಿಸ್ಚಾರ್ಜ್ ಆಗಿದ್ದರು. ಮನೆಯಲ್ಲಿ ಕುಟುಂಬದ ಜೊತೆಗಿದ್ದರು. ಇಂದು ಮಗನಿಗೆ ಕೊರೊನಾ ಸೋಂಕಿರುವುದು ದೃಢವಾಗಿತ್ತು. ಇದರಿಂದ ಶಾಕ್‍ಗೆ ಒಳಗಾಗಿದ್ದು, ಹೃದಯಾಘಾತದಿಂದಾಗಿ ಸಾವನ್ನಪ್ಪಿದ್ದಾರೆ.
47 ವರ್ಷದ ರೋಗಿ ನಂ.381 ಜ್ವರದ ಹಿನ್ನೆಲೆ ಜಮಖಂಡಿ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಸೋಂಕು ಲಕ್ಷಣ ಕಂಡುಬಂದ ಹಿನ್ನೆಲೆ ಸ್ಯಾಂಪಲ್ ಕಳುಹಿಸಲಾಗಿತ್ತು. ಇಂದು ವರದಿ ಬಂದಿದ್ದು, ಕೊರೊನಾ ಸೋಂಕಿರುವುದು ದೃಢವಾಗಿದೆ. ಈ ಸುದ್ದಿ ತಿಳಿದ ಈತನ ತಾಯಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.