Breaking News

ಜನತಾ ಕರ್ಫ್ಯೂ: ಬಾಗಲಕೋಟೆ ಸಂಪೂರ್ಣ ಬೆಂಬಲ

Spread the love

ಬಾಗಲಕೋಟೆ: ವಿಶ್ವವನ್ನು ಕಾಡುತ್ತಿರುವ ಕೊರೊನಾ ವೈರಸ್‌ ಮಹಾಮಾರಿಗೆ ತಡೆಯೊಡ್ಡಲು ಪ್ರಧಾನಿ ನರೇಂದ್ರ ಮೋದಿಜನತಾ ಕರ್ಫ್ಯೂ ಆಚರಿಸುವಂತೆ ನೀಡಿದ್ದ ಕರೆಗೆ ಬಾಗಲಕೋಟೆಯಲ್ಲಿ ಬೆಳಿಗ್ಗೆಯಿಂದಲೇ ಹೋಟೆಲ್ ಗಳು, ಅಂಗಡಿಗಳು ಸಂಪೂರ್ಣ ಮುಚ್ಚಿ ಬೆಂಬಲ ಸೂಚಿಸಿದೆ.

ಅಂಗಡಿ ಮುಂಗಟ್ಟುಗಳು ಸಂಪೂರ್ಣ ಮುಚ್ಚಿದ್ದು, ವ್ಯಾಪಾರ ವಹಿವಾಟುಗಳು ಬಂದ್ ಆಗಿವೆ. ಕೆಎಸ್ ಆರ್ ಟಿಸಿ ಬಸ್ ಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಕಪ್ಯೂ೯ ಹಿನ್ನೆಲೆಯಲ್ಲಿ ಮನೆಯಿಂದ ಹೊರಗಡೆ ಜನ ಬರುತ್ತಿಲ್ಲ. ಟ್ಯಾಕಿ ಚಾಲಕರ ಸಂಘ, ಹೊಟೇಲ್, ಉಪಹಾರ ಮಂದಿರಗಳ ಸಂಘ ಸೇರಿದಂತೆ ಹಲವು ಸಂಘಟನೆಗಳು ಸ್ವಯಂಪ್ರೇರಿತವಾಗಿ ಬೆಂಬಲ ನೀಡುತ್ತಿದ್ದಾರೆ. ಜಿಲ್ಲಾಡಳಿತದಿಂದ ಜಿಲ್ಲೆಯಾದ್ಯಂತ ತೀವ್ರ ಕಟ್ಟೆಚ್ಚರವನ್ನು ವಹಿಸಲಾಗಿದೆ.
ಜನರಿಲ್ಲದೇ ರಸ್ತೆಗಳು, ಬಸ್ ನಿಲ್ದಾಣಗಳು ಬಿಕೋ ಎನ್ನುತ್ತಿವೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ