ಬೆಳಗಾವಿ: ಲಾಕ್ ಡೌನ್ ಹಿನ್ನೆಲೆ ಅನವಶ್ಯಕವಾಗಿ ಮನೆಯಿಂದ ಯಾರು ಹೊರಗೆ ಬರಬೇಡಿ ಅಂತಾ ಬೆಳಗಾವಿ ಜನತೆಗೆ ಶಾಸಕ ಅನಿಲ್ ಬೆನಕೆ ಮನವಿ ಮಾಡಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕು ತಡೆಗಟ್ಟಲು ಪ್ರತಿಯೊಬ್ಬರು ಸಹಕರಿಸಬೇಕು. ಅಗತ್ಯ ಸಾಮಗ್ರಿಗಳ ಅವಶ್ಯಕತೆ ಇದ್ದಾಗ ಮನೆಯ ಒಬ್ಬ ಸದಸ್ಯರು ಮಾತ್ರ ಬಂದು ತಗೆದುಕೊಂಡು ಹೋಗಬೇಕು. ಅಗತ್ಯ ಸಾಮಗ್ರಿಗಳ ಪೂರೈಕೆ ವಿಚಾರವಾಗಿ ಜಿಲ್ಲಾಧಿಕಾರಿಗಳ ಜತೆ ಚರ್ಚೆ ಮಾಡಿದ್ದೇನೆ. ಪ್ರತಿಯೊಬ್ಬರು ಲಾಕ್ ಡೌನ್ ಗೆ ಸ್ಪಂದಿಸಬೇಕು ಎಂದು ಮನವಿ ಮಾಡಿದ್ದಾರೆ.
ಇನ್ನು ಇದೇ ವೇಳೆ ಜತೆಗೆ ಯುಗಾದಿ ಹಬ್ಬದ ಶುಭಾಶಯ ಕೋರಿದ್ರು.