Breaking News
Home / ಜಿಲ್ಲೆ / ಬೆಳಗಾವಿ / ಬೆಳಗಾವಿ ಜಿಲ್ಲೆಯಿಂದ ಕರ್ನಾಟಕ ರಾಜ್ಯದ ಇತರೆ ಜಿಲ್ಲೆಗಳಿಗೆ ತೆರಳಲು ಅವಕಾಶ..

ಬೆಳಗಾವಿ ಜಿಲ್ಲೆಯಿಂದ ಕರ್ನಾಟಕ ರಾಜ್ಯದ ಇತರೆ ಜಿಲ್ಲೆಗಳಿಗೆ ತೆರಳಲು ಅವಕಾಶ..

Spread the love

ಬೆಳಗಾವಿ: ಲಾಕ್ ಡೌನ್ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಿಂದ ಕರ್ನಾಟಕ ರಾಜ್ಯದ ಇತರೆ ಜಿಲ್ಲೆಗಳಿಗೆ ತೆರಳಲು ಬಯಸುವ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು, ಪ್ರವಾಸಿಗರು ಹಾಗೂ ಇತರರಿಗೆ  ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲೆಯಿಂದ ಇತರೆ ಜಿಲ್ಲೆಗಳಿಗೆ ಹೋಗಬಯಸುವವರಿಗೆ ಒಂದು ಸಲ; ಒಂದು ದಿನ ಮತ್ತು ಒಂದು ಬಾರಿ ಸಂಚಾರಕ್ಕೆ ಪಾಸ್ ನೀಡಲಾಗುವುದು.

ಅಂತರ್ ಜಿಲ್ಲಾ ಪ್ರಯಾಣಕ್ಕೆ ಬೆಳಗಾವಿ ತಾಲ್ಲೂಕು ಹೊರತುಪಡಿಸಿ ಉಳಿದ ತಾಲ್ಲೂಕಿನ ಜನರಿಗೆ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳು ಪಾಸ್ ಗಳನ್ನು ನೀಡುವರು.

ಅದೇ ರೀತಿ ಬೆಳಗಾವಿ ನಗರ ಮತ್ತು ಬೆಳಗಾವಿ ತಾಲ್ಲೂಕಿನ ಪ್ರದೇಶದಲ್ಲಿರುವ ಜನರಿಗೆ ಉಪ ಪೊಲೀಸ್ ಆಯುಕ್ತರು(ಡಿಸಿಪಿ) ಪಾಸ್ ಗಳನ್ನು ನೀಡಲಿದ್ದಾರೆ.

ಅರ್ಜಿ ಎಲ್ಲಿ ಸಲ್ಲಿಸಬೇಕು?

ಬೆಳಗಾವಿ ನಗರ ಹಾಗೂ ಬೆಳಗಾವಿ ತಾಲ್ಲೂಕಿನ ಜನರು ಉಪ ಪೊಲೀಸ್ ಆಯುಕ್ತರು (ಡಿಸಿಪಿ) ಬೆಳಗಾವಿ ಇವರಿಗೆ ಅರ್ಜಿಗಳನ್ನು ಸಲ್ಲಿಸಬೇಕು.

ಅದೇ ರೀತಿ ಉಳಿದ ತಾಲ್ಲೂಕಿನಲ್ಲಿ ಇರುವವರು ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ ಮತ್ತಿತರ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿದ್ದರೆ ಆಯಾ ಸ್ಥಳೀಯ ಸಂಸ್ಥೆಯ ಮುಖ್ಯಾಧಿಕಾರಿಗಳಿಗೆ ಅರ್ಜಿಗಳನ್ನು ಸಲ್ಲಿಸಬೇಕು.

ತಾಲ್ಲೂಕು ವ್ಯಾಪ್ತಿಯಲ್ಲಿ ಇರುವವರು ಆಯಾ ತಹಶಿಲ್ದಾರರ ಕಚೇರಿಯಲ್ಲಿ ಅರ್ಜಿಗಳನ್ನು ಸಲ್ಲಿಸಬೇಕು.

ಹೊರ ರಾಜ್ಯ ಪ್ರವಾಸಕ್ಕೆ ಪಾಸ್ ಪಡೆಯುವ ವಿಧಾನ:

ಬೆಳಗಾವಿ ಜಿಲ್ಲೆಯಲ್ಲಿರುವ ಬೇರೆ ರಾಜ್ಯದ ಕಾರ್ಮಿಕರು, ವಿದ್ಯಾರ್ಥಿಗಳು, ಪ್ರವಾಸಿಗರು ಇತರೆ ರಾಜ್ಯಗಳಿಗೆ ತೆರಳಲು ಬಯಸಿದರೆ ಕರ್ನಾಟಕ ಸರ್ಕಾರದ ಸೇವಾಸಿಂಧು ಯೋಜನೆಯ https://sevasindhu.karnataka.gov.in/Sevasindhu/English

  ವೆಬ್‌ಸೈಟ್ ಮೂಲಕ ತಮ್ಮ ಹೆಸರು , ವಿವರಗಳನ್ನು ನೋಂದಾಯಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ.

ಕಾರ್ಮಿಕರು, ವಿದ್ಯಾರ್ಥಿಗಳು ಮತ್ತು ಪ್ರವಾಸಿಗರು ಸಲ್ಲಿಸುವ ಅರ್ಜಿಗಳನ್ನು ಪರಿಶೀಲಿಸಿದ ಬಳಿಕ ಮಾರ್ಗಸೂಚಿ ಅನುಸಾರ ಪ್ರಯಾಣಕ್ಕೆ ಸರ್ಕಾರದಿಂದ ಅನುಮತಿ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

ಕರ್ನಾಟಕ-ಮಹಾರಾಷ್ಟ್ರ ಗಡಿ ಘರ್ಷಣೆ: ಬೆಳಗಾವಿ ಭೇಟಿ ರದ್ದಾಗಿಲ್ಲ, ಮುಂದೂಡಿಕೆ – ಮಹಾ ಸಚಿವ

Spread the loveಮಹಾರಾಷ್ಟ್ರ-ಕರ್ನಾಟಕ ಗಡಿ ಸಂಘರ್ಷ ಭುಗಿಲೆದ್ದಿದ್ದು, ನಮ್ಮ ಬೆಳಗಾವಿ ಭೇಟಿ ಮುಂದೂಡಿಕೆಯಾಗಿದೆ. ರದ್ದುಗೊಳಿಸಿಲ್ಲ ಎಂದು ಮಹಾರಾಷ್ಟ್ರ ಸಚಿವ ಸಂಭುರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ