Breaking News

ನನಗೆ ಕೊರೊನಾ ಸೋಂಕಿದೆ ಕಾಪಾಡಿ- ಬಿಎಸ್‍ವೈಗೆ ಬೆಳಗಾವಿ ಯೋಧ ಮನವಿ

Spread the love

ಬೆಳಗಾವಿ: ನನಗೆ ಕೊರೊನಾ ಸೋಂಕಿದೆ ಕಾಪಾಡಿ ಎಂದು ಜಿಲ್ಲೆಯ ಯೋಧರೊಬ್ಬರು ವಿಡಿಯೋ ಮೂಲಕ ಸಿಎಂ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಮನವಿ ಮಾಡಿಕೊಂಡಿದ್ದಾರೆ.

ಯೋಧ ಸವದತ್ತಿ ತಾಲೂಕಿನ ಹಂಚಿನಾಳ ಗ್ರಾಮದವರಾಗಿದ್ದು, ಮಾರ್ಚ್ 17ರಂದು ಹೈದರಾಬಾದ್‍ನಿಂದ ಗ್ರಾಮಕ್ಕೆ ಬಂದಿದ್ದಾರೆ. ಆದರೆ ತಮಗೆ ಕೊರೊನಾ ಸೋಂಕು ತಗುಲಿದ್ದು, ವೈದ್ಯಾಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ. ದಯವಿಟ್ಟು ನನ್ನನ್ನು ಕಾಪಾಡಿ ಎಂದು ಕೇಳಿದ್ದಾರೆ.ವಿಡಿಯೋದಲ್ಲಿ ಏನಿದೆ?:
ನನಗೆ ಕೋವಿಡ 19 ಲಕ್ಷಣಗಳು ಕಾಣಿಸಿಕೊಂಡಿವೆ. ಈಗ ನನ್ನ ತಾಯಿಯಲ್ಲೂ ಕೊರೊನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿವೆ. ಹುಬ್ಬಳ್ಳಿಯ ಕಿಮ್ಸ್ ವೈದ್ಯರು ನನಗೆ ಸರಿಯಾಗಿ ಚಿಕಿತ್ಸೆ ನೀಡುತ್ತಿಲ್ಲ. ವಿದೇಶದಿಂದ ಬಂದವರನ್ನು ಮಾತ್ರ ಪರೀಕ್ಷೆಗೆ ಒಳಡಿಸುತ್ತಿದ್ದಾರೆ. ನಿನಗೆ ಏನು ಆಗಿಲ್ಲ ಹೋಗು ಅಂತ ಹೇಳುತ್ತಿದ್ದಾರೆ. ದಯವಿಟ್ಟು ನನ್ನನ್ನು ಹಾಗೂ ನನ್ನ ಕುಟುಂಬವನ್ನು ಕಾಪಾಡಿ. ಸೂಕ್ತ ಚಿಕಿತ್ಸೆ ದೊರೆಯುವಂತೆ ಕ್ರಮಕೈಗೊಳ್ಳಿ ಎಂದು ಯೋಧ ಮನವಿ ಸಲ್ಲಿಸಿದ್ದಾರೆ.


Spread the love

About Laxminews 24x7

Check Also

ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Spread the loveಬೆಳಗಾವಿ: ಮಹಾನಗರ ಪಾಲಿಕೆ 8 ಮತ್ತು 9 ವಾರ್ಡ್‌ನಲ್ಲಿನ  ಆಸ್ತಿಗಳಿಗೆ ಮತ್ತೊಬ್ಬರ ಹೆಸರಿನಲ್ಲಿ ಬಾಂಡ್ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ