Breaking News
Home / Uncategorized / ಬೆಳಗಾವಿ -ಇಬ್ಬರು ನಕಲಿ ಪತ್ರಕರ್ತರ ಬಂಧನ…..

ಬೆಳಗಾವಿ -ಇಬ್ಬರು ನಕಲಿ ಪತ್ರಕರ್ತರ ಬಂಧನ…..

Spread the love

ಧಾರವಾಡ ( ಕರ್ನಾಟಕ ವಾರ್ತೆ) ಏ.23:

ಇಲ್ಲಿನ ಬೇಲೂರು ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿರುವ ಬಿಎಂಎನ್ ಅಗ್ರೋ ಫುಡ್ಸ್ ಸಂಸ್ಥೆಗೆ ಭೇಟಿ ನೀಡಿ, ಪತ್ರಕರ್ತರು ಎಂದು ಹೇಳಿ

ಕೊಂಡು ಬೆದರಿಕೆ ಒಡ್ಡಿ, 25 ಸಾವಿರ ರೂ.ಹಣದ ಬೇಡಿಕೆ ಇಟ್ಟಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಜೆಕೆ 24×7 ನ್ಯೂಸ್ ಚಾನೆಲ್ ವರದಿಗಾರ ಎಂದು ಹೇಳಿಕೊಂಡ ಅನ್ವರ್ ಕೆ.ಜಮಾದಾರ ಹಾಗೂ ಜೆಎಂ ಆರ್ ಚಾನೆಲ್ ವರದಿಗಾರ ಎಂದು ಹೇಳಿಕೊಂಡ ನಿಝಾಮ್ ಅಬ್ದುಲ್ ಸಾಬ್ ಪಟೇಲ್ ಗುರುತಿನ ಚೀಟಿ ತೋರಿಸಿ , ಉದ್ಯಮ ಸಂಸ್ಥೆಗೆ ಬೆದರಿಕೆ ಹಾಕಿದ್ದರು.ಅಲ್ಲದೇ 25 ಸಾವಿರ ರೂ.ಗಳ ಹಣದ ಬೇಡಿಕೆಯನ್ನೂ ಸಹ ಇಟ್ಟಿದ್ದರು. ಕೆಎ 22- ಸಿ – 3636 ಸಂಖ್ಯೆಯ ಕಾರಿನಲ್ಲಿ ಅನುಮತಿಯಿಲ್ಲದೇ ಬೆಳಗಾವಿ ಜಿಲ್ಲೆಯಿಂದ ಧಾರವಾಡದವರೆಗೆ ಪ್ರಯಾಣ ಮಾಡಿದ್ದರು.

ಗರಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಈ ಇಬ್ಬರು ನಕಲಿ ಪತ್ರಕರ್ತರನ್ನು ಬಂಧಿಸಿದ್ದಾರೆ.ಧಾರವಾಡ ಗ್ರಾಮೀಣ ಪೊಲೀಸ್ ಇನ್ಸಪೆಕ್ಟರ್ ಎಸ್.ಸಿ.ಪಾಟೀಲ, ಗರಗ ಪಿಎಸ್ ಐ ಪ್ರಸಾದ ನೇತೃತ್ವದಲ್ಲಿ ಪೊಲೀಸರು ಉತ್ತಮ ಕಾರ್ಯ ನಿರ್ವಹಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ


Spread the love

About Laxminews 24x7

Check Also

ಯಡೂರದಿಂದ ಶ್ರಿಶೈಲ್’ದವರೆಗೆ ಸುಮಾರು 560 ಕಿ.ಮೀದವರೆಗೆ ಸಸಿ ನೆಡುವ ಕಾರ್ಯಕ್ರಮಕ್ಕೆ ಸಚಿವ ಉಮೇಶ ಕತ್ತಿ ಚಾಲನೆಯನ್ನು ‌ನೀಡಿದರು…

Spread the loveಶ್ರೀಶೈಲ್ ಜಗದ್ಗುರಗಳ ದ್ವಾದಶ ಪೀಠಾರೋಹಣ ಮಹೋತ್ಸವ ಹಾಗೂ ಜನ್ಮ ಸುವರ್ಣ ಮಹೋತ್ಸವ ಅಂಗವಾಗಿ ಯಡೂರದಿಂದ ಶ್ರಿಶೈಲ್’ದವರೆಗೆ ಸುಮಾರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ