Home / ಜಿಲ್ಲೆ / ಬೆಳಗಾವಿ / ಒಟ್ಟಾರೆಯಾಗಿ ಬೆಳಗಾವಿ ಜಿಲ್ಲಾದ್ಯಂತ ಇಲ್ಲಿಯವರೆಗೆ ಒಟ್ಟು 794 ದಾಳಿ…….

ಒಟ್ಟಾರೆಯಾಗಿ ಬೆಳಗಾವಿ ಜಿಲ್ಲಾದ್ಯಂತ ಇಲ್ಲಿಯವರೆಗೆ ಒಟ್ಟು 794 ದಾಳಿ…….

Spread the love

ಬೆಳಗಾವಿ: ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೋಂಕನ್ನು ತಡೆಗಟ್ಟುವ ಮತ್ತು ಹರಡುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ ಹೊರಡಿಸಿರುವುದರಿಂದ ಜಿಲ್ಲೆಯಾದ್ಯಂತ ಕಳ್ಳಭಟ್ಟ

ಸಾರಾಯಿ ತಯಾರಿಕೆ ಹಾಗೂ ಮಾರಾಟ ಹೆಚ್ಚಾಗುವ ಸಂಭವ ಇರುವುದರಿಂದ ಅಕ್ರಮ ಚಟುವಟಿಕೆಗಳು

ನಡೆಯದಂತೆ ಅಬಕಾರಿ ತಂಡಗಳನ್ನು ರಚಿಸಿರುತ್ತದೆ.

 ದಿನಾಂಕ 24-03-2020 ರಿಂದ ಇಲ್ಲಿಯವರೆಗೆ ಅಕ್ರಮ ಕೇಂದ್ರಗಳಲ್ಲಿ ನಿರಂತರವಾಗಿ ಅಬಕಾರಿ ದಾಳಿ, ಹಗಲು- ರಾತ್ರಿ ಗಸ್ತು, ರಸ್ತೆಗಾವಲು ನಡೆಸಿ,ವಾಹನಗಳನ್ನು ತಪಾಸಣೆ ನಡೆಸಿ, ಕ್ರಮ ಕೈಗೊಳ್ಳಲಾಗಿರುತ್ತದೆ. 

ಒಟ್ಟಾರೆಯಾಗಿ ಬೆಳಗಾವಿ ಜಿಲ್ಲಾದ್ಯಂತ ಇಲ್ಲಿಯವರೆಗೆ ಒಟ್ಟು 794 ದಾಳಿಗಳನ್ನು ನಡೆಸಿ, 108 ಅಬಕಾರಿ ಪ್ರಕರಣಗಳನ್ನು ದಾಖಲಿಸಿಕೊಂಡು 64 ಆರೋಪಿಗಳನ್ನು ಬಂಧಿಸಿ 4662.695 ಲೀಟರ್ ಮದ್ಯ, 95.900 ಲೀಟರ್ ಗೋವಾ ಮದ್ಯ, 10.170ಲೀಟರ್ ಮಹಾರಾಷ್ಟ್ರ ಮದ್ಯ, 1207.200 ಲೀಟರ್ ಬೀಯರ್, 53 ಲೀಟರ್‌ ಸೇಂಧಿ, 170 ಲೀಟರ್ ಬೆಲ್ಲದ ‌ಕೊಳೆ, 79.610 ಲೀಟರ್ ಸಂತ್ರಾ, 93 ಲೀಟರ್ ಕಾಜು, 1714,400 ಲೀಟರ್ ಕಳ್ಳಭಟ್ಟಿ ಸಾರಾಯಿಯನ್ನು, 50ಕೆ.ಜಿ.ಬೆಲ್ಲ ಹಾಗೂ 7.400 ವೈನ್ ವಶಪಡಿಸಿಕೊಳ್ಳಲಾಗಿರುತ್ತದೆ.

79 ದ್ವಿಚಕ್ರ ವಾಹನ, 02 ಆಟೋ ರಿಕ್ಷಾ, 2 ಕಾರ್, 04 ಗೂಡ್ಸ್ ವಾಹನ, 1 ಮಹೇಂದ್ರ ಪಿಕಪ್ (ಒಟ್ಟು 88 ವಾಹನಗಳ ಅಂದಾಜು ಮೌಲ್ಯ 52 ಲಕ್ಷ ) ಮತ್ತು ಮದ್ಯ, ಬೀಯರ್ ಹಾಗೂ ಇತರೆ ಅಂದಾಜು ಮೌಲ್ಯ ರೂ. 58 ಲಕ್ಷಗಳು ಆಗುತ್ತದೆ. ಹೀಗೆ ಒಟ್ಟು ರೂ. 1 ಕೋಟಿ 10 ಲಕ್ಷ ಮೌಲ್ಯದ ಮದ್ಯ ಮತ್ತು ಅಕ್ರಮ ಸಾಗಾಣಿಕೆಗೆ ಬಳಸಿದ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಬಕಾರಿ ಉಪ ಆಯುಕ್ತರಾದ ಬಸವರಾಜ್ ತಿಳಿಸಿದ್ದಾರೆ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ