Breaking News

ಸಂಪೂರ್ಣ ಬಂದ್ “ಆಡಿಯೋ ತುಣುಕು” ನಕಲಿ ಇಂತಹ ಅನಧಿಕೃತ ಮತ್ತು ಸುಳ್ಳು ಸುದ್ದಿಗಳನ್ನು ನಂಬಿ ಆತಂಕಕ್ಕೆ ಒಳಗಾಗಬಾರದು.

Spread the love

ಸಂಪೂರ್ಣ ಬಂದ್ “ಆಡಿಯೋ ತುಣುಕು” ನಕಲಿ: ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಸ್ಪಷ್ಟನೆ

ಬೆಳಗಾವಿ, ಏ.೪: ಕರೊನಾ ಹಿನ್ನೆಲೆಯಲ್ಲಿ ಶನಿವಾರ(ಏ.೪)ದಿಂದ ಸೋಮವಾರದವರೆಗೆ ದಿನಸಿ, ತರಕಾರಿ ಮಾರಾಟ ಸೇರಿದಂತೆ ಎಲ್ಲವೂ ಸಂಪೂರ್ಣ ಬಂದ್ ಎಂಬ “ನಕಲಿ ಆಡಿಯೋ” ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದು ಸಂಪೂರ್ಣ ಸುಳ್ಳು ಮಾಹಿತಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಕರೊನಾ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಕೈಗೊಳ್ಳಲಾಗುವ ಪ್ರತಿಯೊಂದು ಕ್ರಮಗಳ ಕುರಿತು ಲಿಖಿತ ಆದೇಶ ಹೊರಡಿಸಲಾಗುತ್ತದೆ ಎಂದು ತಿಳಿಸಿದರು.

ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಇಂತಹ ಅನಧಿಕೃತ ಮತ್ತು ಸುಳ್ಳು ಸುದ್ದಿಗಳನ್ನು ನಂಬಿ ಆತಂಕಕ್ಕೆ ಒಳಗಾಗಬಾರದು. ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತ ಲಿಖಿತವಾಗಿ ಪ್ರಕಟಿಸುವ ನಿರ್ದೇಶನ ಅಥಾವ ಆದೇಶಗಳನ್ನು ಮಾತ್ರ ಪಾಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.


Spread the love

About Laxminews 24x7

Check Also

ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Spread the loveಬೆಳಗಾವಿ: ಮಹಾನಗರ ಪಾಲಿಕೆ 8 ಮತ್ತು 9 ವಾರ್ಡ್‌ನಲ್ಲಿನ  ಆಸ್ತಿಗಳಿಗೆ ಮತ್ತೊಬ್ಬರ ಹೆಸರಿನಲ್ಲಿ ಬಾಂಡ್ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ