Breaking News

ಬೆಳಗಾವಿಮಹಾನಗರ ಪಾಲಿಕೆ ನಿಯಮ ಉಲ್ಲಂಘಿಸಿದವರೆಗೆ 43,400 ರೂಪಾಯಿ ದಂಡವಿಧಿಸಿದೆ.

Spread the love

ಬೆಳಗಾವಿ -: ಕೋವಿಡ್-೧೯ ಸಾಂಕ್ರಾಮಿಕ ರೋಗ ಹರಡುವಿಕೆಯನ್ನು ತಡೆಗಟ್ಟಲು ನಗರದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ ಸಂಚರಿಸುತ್ತಿದ್ದ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಜನರಿಗೆ ಮಹಾನಗರ ಪಾಲಿಕೆಯು ಒಟ್ಟಾರೆ 43,400 ರೂಪಾಯಿ ದಂಡ ವಿಧಿಸಿದೆ.
ಲಾಕ್ ಡೌನ್-3 ರ ಸಂದರ್ಭದಲ್ಲಿ ಕಿತ್ತಳೆ ವಲಯದಲ್ಲಿರುವ ಬೆಳಗಾವಿ ಜಿಲ್ಲೆಯಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ಕೆಲವು ಆರ್ಥಿಕ ಚಟುವಟಿಕೆಗಳಿಗೆ ಮತ್ತು ಜನಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.
ಈ ವೇಳೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದು, ನಿಯಮ ಉಲ್ಲಂಘಿಸಿದರೆ ದಂಡ ವಿಧಿಸಲು ಅವಕಾಶ ಕಲ್ಪಿಸಿರುತ್ತಾರೆ.
 ಬೆಳಗಾವಿ ಮಹಾನಗರದಲ್ಲಿ ಇದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದ್ದು, ಇಂತಹ ಪ್ರಕರಣಗಳು ಕಂಡುಬಂದಾಗ ಸ್ಥಳದಲ್ಲಿಯೇ ದಂಡ ವಿಧಿಸಲಾಗುತ್ತಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತರಾದ ಜಗದೀಶ್ ಕೆ.ಎಚ್. ತಿಳಿಸಿದ್ದಾರೆ.
ಸಮಾಜದ ಆರೋಗ್ಯದ ದೃಷ್ಟಿಯಿಂದ ಸಾರ್ವಜನಿಕರು ಹೊರಗಡೆ ಸಂಚರಿಸುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

Spread the love

About Laxminews 24x7

Check Also

ಭೂಗತ ಪಾತಕಿ ಬನ್ನಂಜೆ ರಾಜಾ ಸಹಚರ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ.

Spread the loveಅಂಕೋಲಾದಲ್ಲಿ ಉದ್ಯಮಿ ಆರ್. ಎನ್. ನಾಯಕ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂಡಲಗಾ ಜೈಲಿನಲ್ಲಿರುವ ಭೂಗತ ಪಾತಕಿ ಬನ್ನಂಜೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ