ಬೆಳಗಾವಿ: ಜಿಲ್ಲೆಯಲ್ಲಿ ಕೊರೊನಾ ಸೋಮಕು ತಗುಲಿದವರ ಪೈಕಿ ಮತ್ತಿಬ್ಬರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರೇಬಾಗೇವಾಡಿಯ ಪಿ-284 ಮತ್ತು ಪಿ-300 ಇಬ್ಬರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿಇಲ್ಲಿಯವರೆಗೂ 74 ಜನರಲ್ಲಿ ಸೋಂಕು ಪೈಕಿ 36 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಬ್ಬರು ಮೃತಪಟ್ಟಿರುತ್ತಾರೆ.