Breaking News

ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ 8 ಜನರಿಗೆ ವಿವಿಧ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯಲು ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಚೆಕ್ ಗಳನ್ನು ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್

Spread the love

ಬೆಳಗಾವಿ – ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ 8 ಜನರಿಗೆ ವಿವಿಧ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯಲು ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಚೆಕ್ ಗಳನ್ನು ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ವಿತರಿಸಿದರು.
ಮಂಗಳವಾರ ಬೆಳಗ್ಗೆ ನಡೆದ ಸರಳ ಕಾರ್ಯಕ್ರಮದಲ್ಲಿ ಅವರು ಚೆಕ್ ಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿದರು.
ಇಡೀ ಕ್ಷೇತ್ರ ನನಗೆ ಕುಟುಂಬ ಇದ್ದಂತೆ. ಕ್ಷೇತ್ರದ ಜನರು ನನ್ನ ಮೇಲಿಟ್ಟ ವಿಶ್ವಾಸ, ಅವರು ನೀಡಿದ ಸಹಾಯ, ಸಹಕಾರವನ್ನು ನಾನೆಂದೂ ತೀರಿಸಲು ಸಾಧ್ಯವಿಲ್ಲ. ನಮ್ಮ ಮೇಲೆ ವಿಶ್ವಾಸವಿಟ್ಟಿದ್ದಕ್ಕೆ ನಾನು ಎಲ್ಲರಿಗೂ ಚಿರಋುಣಿಯಾಗಿರುತ್ತೇನೆ ಎಂದು ಅವರು ಭಾವುಕರಾಗಿ ನುಡಿದರು. 
 ಗೌರವ್ವ ಯ ಬಂಬರಗಿ ಸಾ. ಯದ್ದಲಭಾವಿಹಟ್ಟಿ, ಮಂಗಲಾ ದು ಅಂಡೋಚೆ ಸಾ. ಸೋನೊಲಿ, ವಿರುಪಾಕ್ಷಿ ಕ ಹೊಸಮನಿ ಸಾ. ಸುಳೇಭಾವಿ, ನೀಲಕಂಠ ಬಾ ಪತ್ತಾರ ಸಾ. ಕಂಗ್ರಾಳಿ ಕೆ ಎಚ್. , ಸಂತೋಷ ಬಾ ತೊಲಗಿ ಸಾ. ಮುತಗಾ, ಶಿವಾಜಿ ಬಾ ಲಖನಗೌಡ ಸಾ. ಸುಳೇಭಾವಿ, ಶಾಂತಾ ಸು ಲಕಮನ್ನವರ ಸಾ. ಕಮಕಾರಟ್ಟಿ, ಅಶೋಕ ಶಿ ಕಾಂಬಳೆ ಸಾ. ಕ್ರಾಂತಿನಗರ ಗಣೇಶಪುರ -ಇವರಿಗೆ ಪರಿಹಾರದ ಚೆಕ್ ನೀಡಲಾಯಿತು. 
ಚೆಕ್ ಗಳನ್ನು ವಿತರಿಸುವ ಸಂದರ್ಭದಲ್ಲಿ ಯುವರಾಜ ಕದಂ, ಬಾಪುಗೌಡ ಪಾಟೀಲ, ಚನ್ನರಾಜ ಹಟ್ಟಿಹೋಳಿ, ಮೃಣಾಲ ಹೆಬ್ಬಾಳಕರ್ ಹಾಗೂ ಫಲಾನುಭವಿಗಳು  ಉಪಸ್ಥಿತರಿದ್ದರು.

Spread the love

About Laxminews 24x7

Check Also

ಭೂಮಿ‌ ಇರೋವರೆಗೂ ಬಸವಣ್ಣನವರ ವಿಚಾರಧಾರೆಗಳನ್ನ ಕಾಪಾಡಬೇಕು: ಬಸವ ಸಂಸ್ಕೃತಿ ಅಭಿಯಾನದಲ್ಲಿ ಸತೀಶ ಜಾರಕಿಹೊಳಿ

Spread the loveಬೆಳಗಾವಿ: “ಭೂಮಿ ಇರುವವರೆಗೆ ಬಸವಣ್ಣನವರ ವಿಚಾರಗಳನ್ನು ಕಾಪಾಡುವ ಪ್ರಯತ್ನ ಮಾಡಬೇಕಿದೆ. ದೇಶದಲ್ಲಿ ಮೂಲ ವಿಚಾರ ಮತ್ತು ಇತಿಹಾಸವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ