ಬೆಳಗಾವಿ- ನಾಳೆ 146 ಕೊರೊನಾ ಶಂಕಿತರ ವರದಿ ನಿರೀಕ್ಷೆಯಲ್ಲಿ ಬೆಳಗಾವಿ ಜಿಲ್ಲಾಡಳಿತವಿದ್ದು ಬೆಳಗಾವಿ ಜಿಲ್ಲಾಡಳಿತದಿಂದ ಹೆಲ್ತ್ ಬುಲೆಟಿನ್ ರಿಲೀಸ್ ಆಗಿದೆ.
ಬೆಳಗಾವಿ ಜಿಲ್ಲೆಯಲ್ಲಿ 50 ಆಕ್ಟಿವ್ ಕೊರೊನಾ ಪಾಸಿಟಿವ್ ಕೇಸ್ ಗಳಿವೆ, ಬೆಳಗಾವಿ ಜಿಲ್ಲೆಯಲ್ಲಿ ಈವರೆಗೂ 8281 ಜನರ ಮೇಲೆ ಆರೋಗ್ಯ ಇಲಾಖೆ ನಿಗಾ ವಹಿಸಿದೆ.
ಒಟ್ಟು 78 ಜನರಿಗೆ 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಒಟ್ಟು 50 ಜನರಿಗೆ ಬೆಳಗಾವಿಯ ಬೀಮ್ಸ್ ಆಸ್ಪತ್ರೆಯಲ್ಲಿ ಐಸೋಲೇಟ್ ಮಾಡಲಾಗಿದೆ.
ಒಟ್ಟು 5974 ಜನರಿಗೆ 14 ದಿನಗಳ ಹೋಮ್ ಕ್ವಾರಂಟೈನ್ ಕಂಪ್ಲೀಟ್ ಆಗಿದೆ. 2179 ಜನರ 28 ದಿನಗಳ ಹೋಮ್ ಕ್ವಾರಂಟೈನ್ ಕಂಪ್ಲೀಟ್ ಆಗಿದೆ.
ಈ ವರೆಗೆ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 6984 ಜನರ ಥ್ರೋಟ್ ಸ್ವ್ಯಾಬ್ ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿತ್ತು ಅದರಲ್ಲಿ ಬಾಗಲಕೋಟೆ ಜಿಲ್ಲೆಯ 8, ಬೆಳಗಾವಿ ಜಿಲ್ಲೆಯ 108 ಸೇರಿ 116 ಜನರಲ್ಲಿ ಕೊರೊನಾ ಪಾಸಿಟಿವ್ ಇರುವದು ದೃಡವಾಗಿತ್ತು ಓರ್ವ ವೃದ್ಧೆ ಸಾವು, 65 ಜನ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
6609 ಜನರ ವರದಿ ಕೊರೊನಾ ನೆಗೆಟಿವ್ ಬಂದಿದೆ. 146 ಜನರ ವರದಿ ನಿರೀಕ್ಷೆಯಲ್ಲಿ ಜಿಲ್ಲಾಡಳಿತವಿದ್ದು,ನಾಳೆ 146 ಜನರ ರಿಪೋರ್ಟ್ ಬರೋದು ಬಾಕಿ ಇದೆ