Breaking News

ಅಗ್ನಿಶಾಮಕ ದಳ ಸಿಬ್ಬಂದಿಗೆ ಲಕ್ಷ್ಮಿ ತಾಯಿ ಫೌಂಡೇಶನ್ ಸನ್ಮಾನ,ಮಾಸ್ಕ್, ಸೆನಿಟೈಸರ್ ವಿತರಣೆ

Spread the love

ಬೆಳಗಾವಿ – ಮಾರಕ ರೋಗ ಕೊರೋನಾ ವೈರಸ್ ತೀವ್ರವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿಯ ಲಕ್ಷ್ಮಿ ತಾಯಿ ಫೌಂಡೇಶನ್ ನಿರಂತರವಾಗಿ ಹೋರಾಟ ನಡೆಸುತ್ತಿದೆ. ಜನಜಾಗ್ರತಿ ಅಭಿಯಾನ, ದಿನಸಿ ಸಾಮಗ್ರಿಗಳ ವಿತರಣೆ, ಔಷಧಗಳ ಸಿಂಪರಣೆ, ಮಾಸ್ಕ್, ಸೆನಿಟೈಸರ್ ವಿತರಣೆ ಮೊದಲಾದ ಚಟುವಟಿಕೆಗಳನ್ನು ನಡೆಸುತ್ತಿದೆ.
ಇದೀಗ ಇದರ ಜೊತೆಗೆ, ಕೊರೋನಾ ವೈರಸ್ ವಿರುದ್ಧ ಹೋರಾಟ ನಡೆಸುತ್ತಿರುವ ಅಗ್ನಿ ಶಾಮಕದಳದ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು. 
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಧಿಕಾರಿಗಳು ತಮ್ಮ ಪ್ರಾಣದ ಹಂಗನ್ನು ತೊರೆದು, “ಜನ ಸೇವೆಯೇ ಜನಾರ್ಧನ ಸೇವೆ ” ಎನ್ನುವ ಹಾಗೆ ಹಗಲಿರುಳು ನಿರಂತರವಾಗಿ ಪ್ರತಿ ಗ್ರಾಮಗಳಗಲ್ಲಿ, ಗಲ್ಲಿಗಳಲ್ಲಿ ಔಷಧ ಸಿಂಪಡಿಸುವ ಮೂಲಕ ಅಮೂಲ್ಯವಾದ ಸೇವೆಯನ್ನು ಮಾಡುತ್ತಿದ್ದಾರೆ. ತಮ್ಮ ಪ್ರಾಣಕ್ಕೆ ಇರುವ ಅಪಾಯವನ್ನೂ ಲೆಕ್ಕಿಸದೆ ಜನರ ರಕ್ಷಣೆಗಾಗಿ ಕೆಲಸ ಮಾಡುತ್ತಿದ್ದಾರೆ.
  ಈ ಎಲ್ಲ ಅಧಿಕಾರಿಗಳ ಸೇವೆಗಳನ್ನು ಪರಿಗಣಿಸಿ ಲಕ್ಷ್ಮೀ ತಾಯಿ ಫೌಂಡೇಷನ್ ವತಿಯಿಂದ  ಸನ್ಮಾನಿಸಿ ಕೃತಜ್ಞತೆಗಳನ್ನು ಸಲ್ಲಿಸಲಾಯಿತು. ಜೊತೆಗೆ ಅಧಿಕಾರಿಗಳ ಸುರಕ್ಷತೆಯ ಹಿತ ದೃಷ್ಟಿಯಿಂದ ಎರಡು ನೂರು ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಾಟಲ್ ಗಳನ್ನು ಹಸ್ತಾಂತರಿಸಲಾಯಿತು.
ಲಕ್ಷ್ಮಿ ತಾಯಿ ಫೌಂಡೇಶನ್ ಪದಾಧಿಕಾರಿಗಳಾದ ಚನ್ನರಾಜ ಹಟ್ಟಿಹೊಳಿ ಹಾಗೂ ಮೃಣಾಲ ಹೆಬ್ಬಾಳಕರ್ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಸನ್ಮಾನಿಸಿದರು.

Spread the love

About Laxminews 24x7

Check Also

ಮಹದಾಯಿ ಯೋಜನೆಗೆ ಕೇಂದ್ರ ಸರ್ಕಾರದ ಪರಿಸರ ಮತ್ತು ವನ್ಯಜೀವಿ ಮಂಡಳಿ ಮುಂದಿನ ಎರಡು ತಿಂಗಳ ಒಳಗಾಗಿ ಅನುಮತಿ ನೀಡಬೇಕು.:ಹೆಚ್. ಕೆ.ಪಾಟೀಲ್

Spread the loveಮಹದಾಯಿ ಯೋಜನೆಗೆ ಕೇಂದ್ರ ಸರ್ಕಾರದ ಪರಿಸರ ಮತ್ತು ವನ್ಯಜೀವಿ ಮಂಡಳಿ ಮುಂದಿನ ಎರಡು ತಿಂಗಳ ಒಳಗಾಗಿ ಅನುಮತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ