Breaking News

ಬೆಳಗಾವಿ:ನಾಳೆಯಿಂದ‌ ಕೇಂದ್ರ ಬಸ್ ನಿಲ್ದಾಣದಿಂದ 252 ಬಸ್ ಗಳು ಬೀದಿಗಿಳಿಯಲಿವೆ.

Spread the love

ಬೆಳಗಾವಿ: ರಾಜ್ಯ ಸರ್ಕಾರ ಬಸ್ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದು, ನಾಳೆಯಿಂದ‌ ಕೇಂದ್ರ ಬಸ್ ನಿಲ್ದಾಣದಿಂದ 252 ಬಸ್ ಗಳು ಬೀದಿಗಿಳಿಯಲಿವೆ.

ಬಸ್ ಸಂಚಾರಕ್ಕಾಗಿ ನಿಲ್ದಾಣದಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಪ್ರಯಾಣಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮಾರ್ಕಿಂಗ್ ವ್ಯವಸ್ಥೆ ಮಾಡಲಾಗುತ್ತಿದೆ.

ನಿಲ್ದಾಣಕ್ಕೆ ಬರೋ‌ ಎಲ್ಲಾ ಪ್ರಯಾಣಿಕರಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡಲಾಗುವದು, ಬಸ್ ನಿಲ್ದಾಣಕ್ಕೆ ಆಗಮಿಸುವವರಿಗಾಗಿ ಸ್ಯಾನಿಟೈಸರ್ ಸ್ಪ್ರೆಯಿಂಗ್ ಮಷಿನ್ ಅಳವಡಿಕೆಗೆ ವ್ಯವಸ್ಥೆ ಮಾಡಲಾಗಿದೆ.

ಒಂದು ಬಸ್ ನಲ್ಲಿ 30 ಜನ ಪ್ರಯಾಣಿಕರಿಗೆ ಮಾತ್ರ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ. ಚಾಲಕ, ನಿರ್ವಾಹಕರಿಗೆ ಮಾಸ್ಕ್, ಸ್ಯಾನಿಟೈಸರ್ ನೀಡಲು ನಿರ್ಧಾರಿಸಲಾಗಿದೆ. 50 ವರ್ಷದ ಮೇಲಿನ ಸಾರಿಗೆ ಸಿಬ್ಬಂದಿ ಬಳಕೆ ಮಾಡುವುದಿಲ್ಲ, ಪ್ರಯಾಣಿಕರ ಬೇಡಿಕೆ ಅನುಸರಿಸಿ ಬಸ್ ಸಂಚಾರ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ ಎಂದು ವಿಭಾಗೀಯ ವ್ಯವಸ್ಥಾಪಕ ಮಹಾದೇವಪ್ಪ ಮು‌ಂಜಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಕೆ.ಎಸ್.ಆರ್. ಸಿ ಬಿ ಎಸ್ ಸಿ ಶಾಲಾ ಮಕ್ಕಳಲ್ಲಿ ಆತ್ಮರಕ್ಷಣೆಯ ಕಲೆ: 150 ವಿದ್ಯಾರ್ಥಿಗಳಿಗೆ ಕರಾಟೆ ಬೆಲ್ಟ್ ವಿತರಣೆ

Spread the loveಬೆಳಗಾವಿ ಜಿಲ್ಲಾ ಸ್ಪೋರ್ಟ್ಸ್ ಕರಾಟೆ ಅಕಾಡೆಮಿ ಮತ್ತು ಬೆಳಗಾವಿ ಜಿಲ್ಲಾ ಸ್ಪೋರ್ಟ್ಸ್ ಅಸೋಸಿಯೇಷನ ವತಿಯಿಂದ ಕೆ.ಎಸ್.ಆರ್. ಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ