ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ರುದ್ರ ನರ್ತನ ಮುಂದುವರೆದಿದೆ.ಇಂದು ಬುಧವಾರ ಬಿಡುಗಡೆಯಾದ ಮಿಡ್ ಡೇ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ 4 ಪಾಸಿಟೀವ್ ಕೇಸ್ ಗಳು ಪತ್ತೆಯಾಗಿವೆ.
ಬೆಳಗಾವಿ ಜಿಲ್ಲೆಯಲ್ಲಿ ಜಿಲ್ಲಾ ಹೆಲ್ತ್ ಬುಲಿಟೀನ್ ಪ್ರಕಾರ ಕೊರೋನಾ ಸೊಂಕಿತರ ಸಂಖ್ಯೆ 147 ಕ್ಕೇರಿದೆ.
ಬೆಳಗಾವಿ ಜಿಲ್ಲೆಯಲ್ಲಿ ಮಹಾರಾಷ್ಟ್ರದ ನಂಜು ಏರುತ್ತಲೇ ಇದ್ದು ಇಂದು ಪತ್ತೆಯಾದ ನಾಲ್ವರೂ ಮಹಾರಾಷ್ಟ್ರ ರಿಟರ್ನ್ ,ಮಹಾರಾಷ್ಟ್ರದ ವಿವಿಧ ನಗರಗಳಿಂದ ಬೆಳಗಾವಿಗೆ ಆಗಮಿಸಿದ್ದ ಈ ನಾಲ್ವರನ್ನು ಬೆಳಗಾವಿಯ ವಿವಿಧ ಲಾಡ್ಜ್ ಗಳಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.
ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ತಾಂಡವ ಮುಂದುವರೆದಿದ್ದು ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ.