Breaking News
Home / ಜಿಲ್ಲೆ / ಬೆಳಗಾವಿ / ಒಂಟಿ ದಾರಿಹೋಕರ ಮೇಲೆ ಹಲ್ಲೆ ನಡೆಸಿ ದರೋಡೆಗೆ ಪ್ಲಾನ್ ಮಾಡಿದ್ದ ನಾಲ್ವರು ಅಂದರ್

ಒಂಟಿ ದಾರಿಹೋಕರ ಮೇಲೆ ಹಲ್ಲೆ ನಡೆಸಿ ದರೋಡೆಗೆ ಪ್ಲಾನ್ ಮಾಡಿದ್ದ ನಾಲ್ವರು ಅಂದರ್

Spread the love

ಬೆಂಗಳೂರು, ಮೇ 27- ಕತ್ತಲಲ್ಲಿ ಹೊಂಚು ಹಾಕಿ ಒಂಟಿ ದಾರಿಹೋಕರ ಮೇಲೆ ಹಲ್ಲೆ ನಡೆಸಿ ನಗ-ನಾಣ್ಯ ದೋಚಲು ಸಜ್ಜಾಗಿದ್ದ ನಾಲ್ವರು ದರೋಡೆಕೋರರು ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ರಾಜಗೋಪಾಲನಗರದ ಅಮರನಾಥ್ (31), ಶಿವರಾಜ್ (32), ಕೆಪಿ ಅಗ್ರಹಾರದ ಶಾಂತರಾಜು (27) ಹಾಗೂ ಶ್ರೀನಿವಾಸ ಬಂಧಿತ ಆರೋಪಿಗಳು.

ನಿನ್ನೆ ರಾತ್ರಿ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಬಿಇಎಲ್ 2ನೆ ಹಂತದ ಭರತ್‍ನಗರ ಪಾರ್ಕ್ ಸಮೀಪ ಕತ್ತಲಲ್ಲಿ ನಿಂತು ದಾರಿಯಲ್ಲಿ ಒಂಟಿಯಾಗಿ ಹೋಗುವ ಸಾರ್ವಜನಿಕರ ಮೇಲೆ ಹಲ್ಲೆ ಮಾಡಿ ನಗದು ಮತ್ತು ಚಿನ್ನಾಭರಣ ದೋಚಲು ಆರೋಪಿಗಳು ಸಜ್ಜಾಗಿದ್ದಾರೆ ಎಂಬ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಸಂಘಟಿತ ಅಪರಾಧ ದಳದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಪ್ರಮುಖ ಆರೋಪಿ ಅಮರನಾಥ್ ಅಲಿಯಾಸ್ ಅಮರ್ ವಿರುದ್ಧ ಸಂಜಯನಗರ ಮತ್ತು ಕೊಡಿಗೇಹಳ್ಳಿಯಲ್ಲಿ ರಾಬರಿ ಕೇಸ್, ಯಲಹಂಕ ಮತ್ತು ರಾಜಗೋಪಾಲನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದರೋಡೆ ಯತ್ನ ಪ್ರಕರಣಗಳು ದಾಖಲಾಗಿವೆ.

ಮತ್ತೊಬ್ಬ ಆರೋಪಿ ಶಿವರಾಜನ ವಿರುದ್ಧ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ, ಕೊಡಿಗೇಹಳ್ಳಿಯಲ್ಲಿ ರಾಬರಿ ಪ್ರಕರಣ ಹಾಗೂ ರಾಜಗೋಪಾಲನಗರ ಠಾಣೆಯಲ್ಲಿ ದರೋಡೆ ಯತ್ನ ಪ್ರಕರಣ ದಾಖಲಾಗಿದ್ದು, ಇವರ ಮೇಲೆ ನ್ಯಾಯಾಲಯ ಹಲವಾರು ಬಾರಿ ವಾರೆಂಟ್ ಹೊರಡಿಸಿದ್ದರೂ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ದರೋಡೆಕೋರರ ಬಳಿ ಇದ್ದ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದು, ಅವರ ವಿರುದ್ಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.


Spread the love

About Laxminews 24x7

Check Also

ಹಲ್ಲೆಗೊಳಗಾದ ಬಿಜೆಪಿ ಮುಖಂಡನ ಆರೋಗ್ಯ ವಿಚಾರಿಸಿದ ವಿಜಯೇಂದ್ರ; ಆರೋಪಿಗಳನ್ನು ಬಂಧಿಸುವಂತೆ ಆಗ್ರಹ

Spread the loveಬೆಳಗಾವಿ : ಬಿಜೆಪಿ ಮುಖಂಡನ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಇಂದು ರಾತ್ರಿಯೇ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ಸೇರಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ