Breaking News
Home / ಜಿಲ್ಲೆ / ಬೆಳಗಾವಿ:ಬೆಳಗುಂದಿಯ 70 ವರ್ಷದ ವೃದ್ಧೆ ಗುಣಮುಖನಾಗಿದ್ದಾನೆ. ವೃದ್ಧನ ಮರು ಪರೀಕ್ಷೆ ವರದಿ ನೆಗೆಟಿವ್

ಬೆಳಗಾವಿ:ಬೆಳಗುಂದಿಯ 70 ವರ್ಷದ ವೃದ್ಧೆ ಗುಣಮುಖನಾಗಿದ್ದಾನೆ. ವೃದ್ಧನ ಮರು ಪರೀಕ್ಷೆ ವರದಿ ನೆಗೆಟಿವ್

Spread the love

ಬೆಳಗಾವಿ: ಜಿಲ್ಲೆಯಲ್ಲಿ ಪ್ರಾರಂಭದಲ್ಲಿ ಮೂವರು ಕೊರೊನಾ ಸೋಂಕಿತರಲ್ಲಿ 70 ವರ್ಷದ ವೃದ್ಧ ಸಂಪೂರ್ಣ ಗುಣಮುಖನಾಗಿದ್ದಾನೆ. ಶೀಘ್ರದಲ್ಲಿ ಬಿಡುಗಡೆಗೊಳಿಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಇಂದು ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿ ತಿಳಿಸಿದರು. ಬೆಳಗಾವಿಯಲ್ಲಿ ಮೊದಲು ಮೂರು ಕೊರೊನಾ ಸೋಂಕಿತರಲ್ಲಿ ಬೆಳಗುಂದಿಯ 70 ವರ್ಷದ ವೃದ್ಧೆ ಗುಣಮುಖನಾಗಿದ್ದಾನೆ. ವೃದ್ಧನ ಮರು ಪರೀಕ್ಷೆ ವರದಿ ನೆಗೆಟಿವ್ ಬಂದಿದೆ. ಶೀಘ್ರವೇ ಡಿಶ್ಚಾರ್ಜ್ ಮಾಡಲಾಗುತ್ತದೆ ಎಂದು ತಿಳಿಸಿದರು.

ಸೋಂಕಿತರ ಪ್ರಮಾಣ ಹೆಚ್ಚಾದಂತೆ ಸರ್ಕಾರ ಮಾರ್ಗಸೂಚಿಗಳಲ್ಲಿ ಮಾರ್ಪಾಡು ಮಾಡಲಾಗಿದ್ದು, ಆ ಪ್ರಕಾರ ಕ್ವಾರಂಟೈನ್ ಗೆ ಕ್ರಮಕೈಗೊಳ್ಳಬೇಕು. ಪೊಲೀಸ್ ಬಂದೋಬಸ್ತ್, ಕ್ವಾರಂಟೈನ್ ಕೇಂದ್ರಗಳ ಮೇಲೆ ನಿಗಾ ವಹಿಸಲು ಹೆಚ್ಚುವರಿ ಪೊಲೀಸ್ ಪಡೆ ಬೇಕಾದರೆ ಕರೆಯಿಸಿಕೊಳ್ಳಬೇಕು ಎಂದು ಸಚಿವ ಶೆಟ್ಟರ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕುಡಚಿ ಮತ್ತು ಹಿರೇಬಾಗೇವಾಡಿಯಲ್ಲಿ ಅತೀ ಹೆಚ್ಚು ಪ್ರಕರಣಗಳು ಕಂಡುಬರುತ್ತಿವೆ. ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು.

ಸಚಿವ ರಮೇಶ ಜಾರಕಿಹೊಳಿ, ಶಾಸಕ ಅನಿಲ್ ಬೆನಕೆ, ಅಭಯ್ ಪಾಟೀಲ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ.ಅತೀಕ್, ಕೋವಿಡ್-೧೯ ನಿಯಂತ್ರಣಾ ಕ್ರಮಗಳ ಉಸ್ತುವಾರಿಯಾಗಿರುವ ವಾಯವ್ಯ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್, ಪೊಲಿಸ್ ಆಯುಕ್ತರಾದ ಬಿ.ಎಸ್.ಲೋಕೇಶ್ ಕುಮಾರ್, ಪೊಲಿಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮತ್ತಿತರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬೆಂಗಳೂರು ಗ್ರಾಮಾಂತರ, ಮಂಡ್ಯದಲ್ಲಿ ವರ್ಷದ ಮೊದಲ ಮಳೆ

Spread the love ಗುರುವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ವ್ಯಾಪಕ ಮಳೆಯಾಗುತ್ತಿದೆ. ಉತ್ತರ ಮತ್ತು ಮಧ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ