Breaking News

ಹಿರೇಬಾಗೇವಾಡಿ ಗ್ರಾಮಸ್ಥರಿಗೆ ರಮೇಶ್ ಜಾರಕಿಹೊಳಿ ಅವರು,ದಿನಸಿ ಕಿಟ್ ಗಳನ್ನು ವಿತರಿಸಿದರು.

Spread the love

ಬೆಳಗಾವಿ- ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಗ್ರಾಮಸ್ಥರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಶುಕ್ರವಾರ ದಿನಸಿ ಕಿಟ್ ಗಳನ್ನು ವಿತರಿಸಿದರು.

ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ, ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ್, ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಹೇಶ್ ಕುಮಠಳ್ಳಿ, ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಮತ್ತಿತರರು ಉಪಸ್ಥಿತರಿದ್ದರು.

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ಮೊದಲ ಬಾರಿಗೆ ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಭೇಟಿ ನೀಡಿದ ರಮೇಶ್ ಜಾರಕಿಹೊಳಿ ಹಿರೇಬಾಗೇವಾಡಿ ಗ್ರಾಮದ ಕಾರ್ಮಿಕರಿಗೆ ಸರ್ಕಾರದ ವತಿಯಿಂದ ಸಿದ್ಧಪಡಿಸಲಾದ ಆಹಾರ ಸಾಮುಗ್ರಿಗಳ ಕಿಟ್ ವಿತರಣೆ ಮಾಡಿದರು.

ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ, ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ್ ಅಂಗಡಿ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಹೇಶ್ ಕುಮಠಳ್ಳಿ, ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಮತ್ತಿತರರು ಉಪಸ್ಥಿತರಿದ್ದರು.

ಕೊರೋನಾದಿಂದಾಗಿ ಹಿರೇಬಾಗೇವಾಡಿ ಗ್ರಾಮಸ್ಥರು ತೀವ್ರ ಸಂಕಷ್ಟಕ್ಕೀಡಾಗಿದ್ದು, ಅವರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಆಗ್ರಹಿಸಿದ್ದು ಇಲ್ಲಿ ಉಲ್ಲೇಖನೀಯ. ಜಿಲ್ಲಾಧಿಕಾರಿಗಳನ್ನು ಗ್ರಾಮಕ್ಕೆ ಕರೆದೊಯ್ದು ಸಭೆಯನ್ನೂ ನಡೆಸಿದ್ದರು.

ತಮ್ಮ ಲಕ್ಷ್ಮಿ ತಾಯಿ ಫೌಂಡೇಶನ್ ನಿಂದ ಕೂಡ ದಿನಸಿ, ತರಕಾರಿ ಸೇರಿದಂತೆ ಹಲವು ರೀತಿಯಲ್ಲಿ ಲಕ್ಷ್ಮಿ ಹೆಬ್ಬಾಳಕರ್ ಹಿರೇಬಾಗೇವಾಡಿ ಗ್ರಾಮಸ್ಥರಿಗೆ ನೆರವು ನೀಡಿದ್ದರು. ಇದೀಗ ಜಿಲ್ಲಾಡಳಿತದಿಂದ ದಿನಸಿ ಕಿಟ್ ಗಳನ್ನು ವಿತರಿಸಲಾಗಿದೆ.


Spread the love

About Laxminews 24x7

Check Also

ಕನಿಷ್ಠ ವೇತನಕ್ಕೆ ಒತ್ತಾಯಿಸಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಮನವಿ

Spread the loveಬೆಳಗಾವಿ: ರಾಜ್ಯದ ಅನುಸೂಚಿತ ಉದ್ದಿಮೆಗಳಿಗೆ ಕನಿಷ್ಠ ವೇತನ ಪ್ರಕಟಿಸಬೇಕಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ