Breaking News

ಗೋವಾ ರಾಜ್ಯಕ್ಕೆ ಮಾಂಸ ಸಾಗಾಟ ಮಾಡಲಾಗುತ್ತಿದೆ ಎಂದು ಕೆಲ ಕಿಡಿಗೇಡಿಗಳು  ವಾಹನಕ್ಕೆ ಬೆಂಕಿ ಹಚ್ಚಿ ಸುಡಲಾಗಿದೆ.

Spread the love

ಬೆಳಗಾವಿ:  ಜಿಲ್ಲೆಯಿಂದ  ಗೋವಾ ರಾಜ್ಯಕ್ಕೆ ಮಾಂಸ ಸಾಗಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ ಕೆಲ ಕಿಡಿಗೇಡಿಗಳು  ವಾಹನಕ್ಕೆ ಬೆಂಕಿ ಹಚ್ಚಿದ ಘಟನೆ ಕರ್ಲೇ- ಬೆಳವಟ್ಟಿ ಗ್ರಾಮದ ಮಧ್ಯೆ ನಡೆದಿದೆ.

ಗೋವಾ ರಾಜ್ಯಕ್ಕೆ ಮಾಂಸ ಸಾಗಾಟ ಮಾಡಲಾಗುತ್ತಿದೆ ಎಂದು  ಕೆಲ ಹಿಂದೂ ಸಂಘಟನೆ ಕಾರ್ಯಕರ್ತರು ವಾಹನಕ್ಕಗಿ ಕಾಯುತ್ತಾ ನಿಂತಿದ್ದರು.  ಕರ್ಲೇಯಿಂದ ಒಂದು ಕಿ.ಮೀ. ಅಂತರದಲ್ಲಿ ವಾಹನ ಬರುತ್ತಿದ್ದಂತೆ ತಡೆದು ವಾಹನಕ್ಕೆ ಬೆಂಕಿ ಹಚ್ಚಿ ಸುಡಲಾಗಿದೆ. ವಾಹನದಲ್ಲಿ ಇದ್ದವರು ಓಡಿ ಹೋಗಿದ್ದಾರೆ. ಬೆಳವಟ್ಟಿ ಮಾರ್ಗದಿಂದ ಗೋವಾಕ್ಕೆ ಈ ವಾಹನ ಹೊರಟಿತ್ತು ಎನ್ನಲಾಗಿದೆ.

ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು,   ಇದನ್ನು ನೋಡಲು ಜನರು ತಂಡೋಪ ತಂಡವಾಗಿ ಬರುತ್ತಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.


Spread the love

About Laxminews 24x7

Check Also

ಕಾರದಗಾ ಗ್ರಾಮದ ಅಭಿವೃದ್ಧಿಯೇ ನನ್ನ ಧ್ಯೇಯ

Spread the loveಕಾರದಗಾ ಗ್ರಾಮದಲ್ಲಿ 1 ಕೋಟಿ 08 ಲಕ್ಷ ರೂ. ಮೊತ್ತದಲ್ಲಿ ವಿವಿಧ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಲಾಯಿತು.ಇದಕ್ಕೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ