ಬೆಳಗಾವಿ: ಯಮಕನಮರಡಿ ಕ್ಷೇತ್ರದ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯಲು ಸಿದ್ದರಾಗುತ್ತಿರುವ ವಿದ್ಯಾರ್ಥಿಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರು ಸೋಮವಾರ ಉಚಿತ ಮಾಸ್ಕ್, ಸ್ಯಾನಿಟೈಸರ್ ವಿತರಣೆ ಮಾಡಿದರು.
ಯಮಕನಮರಡಿ ಸೇರಿ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ 200 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಸಿದರು.
ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಜತೆಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಸುರಕ್ಷಿತವಾಗಿ ಇರುವಂತೆ ವಿದ್ಯಾರ್ಥಿಗಳಿಗೆ ಶಾಸಕ ಸತೀಶ ಜಾರಕಿಹೊಳಿ ಅವರು ಕರೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ಸತೀಶ ಅವರ ಪುತ್ರ ರಾಹುಲ್ ಜಾರಕಿಹೊಳಿ, ಜಿಪಂ ಉಪಾಧ್ಯಕ್ಷ ಅರುಣ ಕಟಾಂಬಳೆ ಸೇರಿದಂತೆ ಗ್ರಾಮದ ಮುಖಂಡರು ಇದ್ದರು.
Laxmi News 24×7